ಶಾಸಕ ಬಾದರ್ಲಿಗೆ ಸನ್ಮಾನ
ಸಿಂಧನೂರು: ತಾಲೂಕ ಸಿಂಪಿ(ಬಣಕಾರ) ಸಮಾಜ ಹಾಗೂ ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ನೂತನ ಶಾಸಕ ಹಂಪನಗೌಡ ಬಾದರ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಭೆಯಲ್ಲಿ ಸಮಾಜದ ಅಧ್ಯಕ್ಷ ಆದೆಪ್ಪ ಚನ್ನಿ, ಮುಖಂಡರಾದ ಎಲ್.ಅಮರೇಶಪ್ಪ, ಮಲ್ಲಪ್ಪ ಟೇಲರ, ಸಂಗಪ್ಪ ಗಿಡದ, ಸಂಗಪ್ಪ ಮಜ್ಜಿಗಿ, ರಾಚಪ್ಪ ಕಂದಕೂರ, ಶಿವಕುಮಾರ ಮಜ್ಜಿಗೆ ಸೇರಿದಂತೆ ಅನೇಕ ಪದಾಧಿಕಾರಿಗಳು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ನಾಳೆ ವಿದ್ಯುತ್ ವ್ಯತ್ಯಯ
ರಾಯಚೂರು: ರಾಯಚೂರು ಗ್ರಾಮೀಣ, ಮಾನವಿ ಮತ್ತು ದೇವದುರ್ಗ ತಾಲೂಕಿನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 110 ಕೆವಿ ಮಾಟಮಾರಿಯ ಬೃಹತ್ ಕಾಮಗಾರಿ ವಿದ್ಯುತ್ ಪ್ರಸರಣ ನಿಗಮದ ಕಾಮಗಾರಿ ನಿಮಿತ್ತ ಮೇ 30ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯ ನಿರ್ವಾಹಕ ಅಭಿಯಂತರರು, ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ ಅಧಿಕಾರಿಗಳು ಪ್ರಕಟಣೆ ತಿಳಿಸಿದೆ.
ಅಂಧ ಮಕ್ಕಳಿಂದ
ಅರ್ಜಿ ಆಹ್ವಾನ
ರಾಯಚೂರು: ಫಾರ್ ದಿ ಬ್ಲೈಂಡ್ ವಿದ್ಯಾಲಯವು 2013- 14ನೇ ಸಾಲಿಗೆ ಅಂಧ ಮಕ್ಕಳಿಗೆ ಪ್ರವೇಶಕ್ಕೆ ಆಸಕ್ತರಿಂದ ಅರ್ಜಿ ಕರೆಯಲಾಗಿದೆ. 1ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಜೂ. 20ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿಯ ದೂ. 9448844418 ಇಲ್ಲಿಗೆ ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

