ಶೇ.22.75 ಅನುದಾನದ ಫಲಾನುಭವಿಗಳ ಆಯ್ಕೆ
ಕನ್ನಡಪ್ರಭ ವಾರ್ತೆ, ಮುದಗಲ್, ಮೇ 28
ಸ್ಥಳೀಯ ಪಟ್ಟಣ ಪಂಚಾಯಿತಿಯ ಶೇ. 22.75 ಮತ್ತು ಶೇ.7.25ರ ಅನುದಾನದಲ್ಲಿ ಕಚ್ಚಾ ಪಕ್ಕಾ ಮನೆ, ಗ್ಯಾಸ್, ಶೌಚಾಲಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಮಹಾಜನ್ ಅವರು ಚೀಟಿ ಎತ್ತುವ ಮೂಲಕ ಚಾಲನೆ ನೀಡಿದರು.
ಪಟ್ಟಣ ಪಂಚಾಯಿತಿ ಸಭಾ ಭವನದಲ್ಲಿ ಹಮ್ಮಿಕೊಂಡ ಆಯ್ಕೆ ಪ್ರಕ್ರಿಯೆಗೆ ಮುಂಚೆ ಪಪಂ ಮುಖ್ಯಾಧಿಕಾರಿ ಎಂ. ವಿಜಯಲಕ್ಷ್ಮೀ ಮಾತನಾಡಿ, ಆಡಳಿತಾಧಿಕಾರಿಗಳ ಸಲಹೆ ಮೇರೆಗೆ ಚೀಟಿ ಎತ್ತುವ ಮೂಲಕ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಈ ಬಾರಿಯ ಫಲಾನುಭವಿಗಳು ಅದೃಷ್ಟದ ಫಲಾನುಭವಿಗಳು. ಆಯ್ಕೆಯಲ್ಲಿ ಯಾವುದೇ ರೀತಿಯ ಶಿಫಾರಸ್ಸು ಇಲ್ಲದೇ ಆಯ್ಕೆಯಾಗುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
14 ಫಲಾನುಭವಿಗಳ ಆಯ್ಕೆ: ಶೇ. 22.75ರ 9.80 ಲಕ್ಷ ಅನುದಾನದಲ್ಲಿ ಕಚ್ಚಾಪಕ್ಕಾ ಮನೆಗಳಿಗಾಗಿ ಎಸ್ಸಿ ಮತ್ತು ಎಸ್ಟಿ ಸೇರಿಸಿ ಒಟ್ಟು 14 ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅದಕ್ಕೆ ಎಸ್ಸಿ 73 ಮತ್ತು ಎಸ್ಟಿಯ 10 ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿ ಎಸ್ಸಿಯ 10 ಮತ್ತು ಎಸ್ಟಿಯ 4 ಫಲಾನುಭವಿಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು.
ಶೇ. 22.75ರ ಅನುದಾನದಲ್ಲಿ ಪ್ರತಿ ಫಲಾನುಭವಿಗೆ 70 ಸಾವಿರ ಧನಸಹಾಯ ನೀಡಲಾಗುವದು. 75 ಅರ್ಜಿಗಳು ಸ್ವೀಕೃತವಾಗಿದ್ದು ಅದರಲ್ಲಿ 10 ಫಲಾನುಭವಿಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ಶೇ.7.25 ಅನುದಾನದಲ್ಲಿ ಇತರೆ ಜನಾಂಗಕ್ಕಾಗಿ ಗ್ಯಾಸ್ ಸಿಲಿಂಡರ್ಗಾಗಿ 112 ಅರ್ಜಿ ಸ್ವೀಕೃತವಾಗಿದ್ದು, ಅದರಲ್ಲಿ 23 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಅದಕ್ಕಾಗಿ 1.40 ಲಕ್ಷ ಹಣ ಕಾಯ್ದಿರಿಸಲಾಗಿದೆ. ಅದೇ ರೀತಿ ಶೇ. 22.75ರ ಅನುದಾನದಲ್ಲಿ ಎಸ್ಸಿ ಮತ್ತು ಎಸ್ಟಿ ಫಲಾನುಭವಿಗಳ ಆಯ್ಕೆ ನಿಟ್ಟಿನಲ್ಲಿ ಒಟ್ಟು 19 ಅರ್ಜಿಳಲ್ಲಿ 17 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಇಬ್ಬರು ಫಲಾನುಭವಿಗಳು ಈ ಹಿಂದೆ ಸಹಾಯಧನ ಪಡೆದುಕೊಂಡಿದ್ದರಿಂದ ತಿರಸ್ಕರಿಸಲಾಗಿದೆ. ಅದಕ್ಕಾಗಿ ಪ್ರತಿ ಫಲಾನುಭವಿಗೆ 20 ಸಾವಿರ ನಿಗದಿಪಡಿಸಲಾಗಿದೆ ಎಂದು ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮೀ 'ಕನ್ನಡಪ್ರಭ'ಕ್ಕೆ ಮಾಹಿತಿ ಒದಗಿಸಿದರು.
ಪಪಂ ಸಿಬ್ಬಂದಿ ಚನ್ನಮ್ಮ, ರಂಗನಾಥ, ವೆಂಕಟೇಶ, ಬಸವರಾಜ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

