ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು: ಪ್ರಸಕ್ತ ಸಾಲಿಗೆ ಎರಡು ವರ್ಷಗಳ ಐಟಿಐ ವಿವಿಧ ಟ್ರೇಡ್ಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಗೆ 2ನೇ ವರ್ಷ 3ನೇ ಸೆಮಿಸ್ಟರ್ ಡಿಪ್ಲೋಮಾಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಐಟಿಐನ ಎರಡು ವರ್ಷಗಳ ಅವಧಿಯ ವಿವಿಧ ಟ್ರೇಡ್ಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ ಢಿಢಿಢಿ.ಜಡಿಜ.್ಞಛ್ಠ.ಟ್ಝ್ಛಿ.್ಝಟಿ, ಢಿಢಿಢಿ.ಜಡಿಜ.್ಞಛ್ಠಟಿಛಡಿಛ್ಞ.್ಝಟಿ, ಢಿಢಿಢಿ.ಜ್ಝಠಟ್ಟಟಛಛಜಟ್ಝಡಡ್ಝ್ಟಟಿ.್ಝಟಿ ನಲ್ಲಿ ಅರ್ಜಿ ಪಡೆಯಬಹುದು ಅಥವಾ ಸಂಸ್ಥೆಯಲ್ಲಿ 10 ನೀಡಿ ಅರ್ಜಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಎಸ್ಸೆಎಸ್ಸೆಎಲ್ಸಿ, ಐಟಿಐ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ ಆಭ್ಯರ್ಥಿ ಪ್ರಮಾಣ ಪತ್ರ ಹಾಗೂ ಇನ್ನಿತರೆ ದಾಖಲೆಗಳು ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಜೂ. 24ರೊಳಗೆ ಸಂಬಂಧಿಸಿದ ನೋಡಲ್ ಸೆಂಟರಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಪ್ರಾಂಶುಪಾಲರನ್ನು ಸಂಪರ್ಕಿಸಬಹುದೆಂದು ಪ್ರಾಚಾರ್ಯರು ಸರ್ಕಾರಿ ಪಾಲಿಟೆಕ್ನಿಕ್, ರಾಯಚೂರು ತಿಳಿಸಿದ್ದಾರೆ.
ಆರ್ಟಿಪಿಎಸ್ 8ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 8ನೇ ಘಟಕ ತಾಂತ್ರಿಕ ದೋಷದಿಂದಾಗಿ ಮಂಗಳವಾರ ರಾತ್ರಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ವಿದ್ಯುತ್ ಘಟಕದಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಅಧಿಕಾರಿಗಳು ಉತ್ಪಾದನೆ ಸ್ಥಗಿತಗೊಳಿಸಿದ್ದು, ಇತ್ತೀಚೆಗೆ ವಿದ್ಯುತ್ ಕೇಂದ್ರದ 7ನೇ ಘಟಕವು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿತ್ತು. ಆದರೆ ಇದೇ ವೇಳೆ ಕಳೆದ ಕೆಲ ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಮೂರನೇ ಘಟಕ ಕಾರ್ಯಾರಂಭ ಮಾಡಿದೆ ಎಂದು ಆರ್ಟಿಪಿಎಸ್ ಮೂಲಗಳು ಹೇಳಿವೆ. ವಿದ್ಯುತ್ ಕೇಂದ್ರದಿಂದ ಬುಧವಾರ ಬೆಳಗ್ಗೆವರೆಗೆ ಒಟ್ಟು 1129 ಮೆವ್ಯಾ ವಿದ್ಯುತ್ ರಾಜ್ಯಕ್ಕೆ ರವಾನಿಸಲಾಗಿದೆ ಎಂದು ಗೊತ್ತಾಗಿದೆ.
ಜ್ಞಾನಜ್ಯೋತಿ ಕಾಲೇಜಿಗೆ ರ್ಯಾಂಕ್
ಸಿಂಧನೂರು: ಜ್ಞಾನಜ್ಯೋತಿ ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಆಯ್ಕೆಯಾಗಿದ್ದಾರೆ. ಮಂಜುನಾಥ ಎ.ಎನ್ನುವ ವಿದ್ಯಾರ್ಥಿ ಎಂಜಿನಿಯರಿಂಗ್ ವಿಭಾಗದ 139ನೇ ರ್ಯಾಂಕ್ ಪಡೆದರೆ, ವಿರೂಪಾಕ್ಷರಡ್ಡಿ ಎನ್ನುವ ವಿದ್ಯಾರ್ಥಿ ಮೆಡಿಕಲ್ ವಿಭಾಗದಲ್ಲಿ 222, ಎಂಜಿನಿಯರಿಂಗ್ನಲ್ಲಿ 819 ರ್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ವಿಷ್ಣುವರ್ಧನರೆಡ್ಡಿ ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

