ರಾಯಚೂರು

ಅಕ್ರಮ ಮರಳು ಸಾಗಣೆ ತಡೆಗೆ ಆಗ್ರಹ

Published On :

ರಾಯಚೂರು: ತಾಲೂಕಿನಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಷೀರುದ್ದೀನ್ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ, ತುಂಗಭದ್ರಾ ಎಡದಂಡೆ ಕಾಲುವೆಯ ದುರಸ್ತಿಯ ಗುತ್ತಿಗೆದಾರ ಡಿ.ವೈ. ಉಪ್ಪಾರ್ ಅವರು ಕಾಲುವೆಯ ಆಧುನೀಕರಣ ಕಾಮಗಾರಿ ನೆಪದಲ್ಲಿ ತುಂಗಭದ್ರಾ ನದಿಯಿಂದ ಮರಳು ಮೇಲೆತ್ತಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆಂದು ದೂರಿದ್ದಾರೆ.
ಅದೇ ರೀತಿ ಕೃಷ್ಣಾ ನದಿಯಿಂದ ದಿನವೂ ನೂರಾರು ಟ್ರ್ಯಾಕ್ಟರ್ ಮತ್ತು ಲಾರಿಗಳ ಮುಖಾಂತರ ಮರಳು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುವ ದಂಧೆ ಜಾರಿಯಲ್ಲಿದ್ದು, ಯರಮರಸ್ ಬಳಿ ನಿರ್ಮಿಸುತ್ತಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕಾಗಿ ಗುತ್ತಿಗೆದಾರರು ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದಾರೆಂದು ದೂರಿದ್ದಾರೆ.
ಕೋಟ್ಯಂತರ ರು. ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದರೂ ಅಧಿಕಾರಿಗಳು ಅತ್ತ ಗಮನಹರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಅಕ್ರಮ ಮರಳು ಸಾಗಣೆ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಮರಳು ಜಪ್ತಿ ಮಾಡಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.