ರಾಯಚೂರು

ವಿದ್ಯಾರ್ಥಿಗಳ ಬೀಳ್ಕೊಡುಗೆ

Published On :

ರಾಯಚೂರು: ನಗರದ ಹೊರವಲಯದ ಯರಮರಸ್ನ ಎಸ್ಎಲ್ಎನ್ ಎಂಜಿನಿಯರಿಂಗ್ ಕಾಲೇಜಿನ ತಾಂತ್ರಿಕ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಬಸವರಾಜಸ್ವಾಮಿ ಅವರು, ವಿದ್ಯಾರ್ಥಿಗಳು ಎಲ್ಲ ರಂಗಗಳಲ್ಲಿ ಸೇವೆ ಸಲ್ಲಿಸುವಂತಾಗಲು ಉತ್ತಮ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಬಿ. ಚೆಟ್ಟಿ, ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ. ಅಮರೇಶ್ ಪಾಟೀಲ್ ಹರವಿ ಮತ್ತಿತರರು ಪಾಲ್ಗೊಂಡಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಸಮಾರಂಭದಲ್ಲಿದ್ದರು.
ಪ್ರವೇಶ: ಮಾನ್ಯತೆ ಕಡ್ಡಾಯ
ರಾಯಚೂರು: ಜಿಲ್ಲೆಯಲ್ಲಿ ಹೊಸದಾಗಿ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಬಯಸಿರುವ ಯಾವುದೇ ಸಂಘ ಸಂಸ್ಥೆಗಳು ಸರ್ಕಾರದಿಂದ ಮತ್ತು ಇಲಾಖೆಯಿಂದ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಪರಮೇಶ್ ಅವರು, ಮಾನ್ಯತೆ ಪಡೆಯದೇ ಪ್ರವೇಶವನ್ನು ತೆಗೆದುಕೊಳ್ಳುವಂತಿಲ್ಲ. ಮಾನ್ಯತೆ ಇಲ್ಲದೆ ಪ್ರವೇಶವನ್ನು ಪಡೆದು ಕೊಳ್ಳುವುದು ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.