ರಾಯಚೂರು

ಟ್ರ್ಯಾಕ್ಟರ್ ಡಿಕ್ಕಿ: ವ್ಯಕ್ತಿ ಸಾವು

Published On :

ರಾಯಚೂರು: ಸಿಂಧನೂರು ತಾಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಮೃತನನ್ನು ಚಂದ್ರಗೌಡ ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿ ಸಾಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದ್ದು, ಆತ ಕೆಳಗೆ ಬಿದ್ದಾಗ ಟ್ರ್ಯಾಕ್ಟರ್ನ ಹಿಂದಿನ ಗಾಲಿಗೆ ಸಿಲುಕಿ ತಲೆಗೆ ಭಾರಿ ಗಾಯವಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಟ್ರ್ಯಾಕ್ಟರ್ ಅಡಿ ಸಿಲುಕಿ ಸಾವು
ರಾಯಚೂರು: ಸಿಂಧನೂರು ತಾಲೂಕಿನ ತುರಕಟ್ಟಿ ಕ್ಯಾಂಪಿನ ಬಳಿ ಟ್ರ್ಯಾಕ್ಟರ್ ಅಡಿ ಸಿಲುಕಿ ಅದರ ಚಾಲಕ ಸಾವಿಗೀಡಾಗಿದ್ದಾನೆ. ಮೃತನನ್ನು ಮಹಾಂತೇಶ್ ಎಂದು ಗುರುತಿಸಲಾಗಿದೆ. ಈತ ಟ್ರ್ಯಾಕ್ಟರ್ ನಲ್ಲಿ ಮರಳು ಸಾಗಿಸಲು ಕೊಪ್ಪಳ ಕ್ಯಾಂಪಿಗೆ ತೆರಳಿದ್ದು ಅಲ್ಲಿಂದ ಮರಳುತ್ತಿದ್ದ ವೇಳೆ ಮಾರ್ಗದಲ್ಲಿ ಟ್ರಾಕ್ಟರ್ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ತಗ್ಗಿಗೆ ಇಳಿದಿದ್ದು ಅದನ್ನು ಓಡಿಸುತ್ತಿದ್ದ ಮಹಾಂತೇಶ್ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆ ಟ್ರಾಕ್ಟರ್ ಸಾಗಿದ್ದರಿಂದ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೈಕ್ ಅಪಘಾತ; ವ್ಯಕ್ತಿ ಸಾವು
ರಾಯಚೂರು: ಸಿಂಧನೂರು ನಗರದ ಯಲ್ಲಮ್ಮ ಗುಡಿಯ ಬಳಿ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಮೃತನನ್ನು ಶಂಕ್ರಪ್ಪ ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿ ಸಾಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬೈಕ್ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿ ಹೊಡೆದಿದ್ದು, ಅದರಿಂದ ತೀವ್ರ ಗಾಯಗೊಂಡ ಆತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕತ್ಸೆ ವೇಳೆ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚುನಾವಣೆ ವೆಚ್ಚ: ವರದಿ ನೀಡಲು ಸೂಚನೆ
ರಾಯಚೂರು: ಜಿಲ್ಲೆಯಲ್ಲಿ ಈಚೇಗೆ ನಡೆದ ವಿಧಾನಸಭೆ ಚುನಾವಣೆಯ ವೆಚ್ಚದ ಮಾಹಿತಿಯನ್ನು ಸಲ್ಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಚುನಾವಣೆ ವೆಚ್ಚಗಳ ವಿವರಗಳನ್ನು ಸಲ್ಲಿಸಲು ಭಾರತೀಯ ಚುನಾವಣಾ ಆಯೋಗವು ರೂಪಿಸಿದ ನಿರ್ದೇಶನದ ಕೈಪಿಡಿಯ ಪ್ಯಾರಾ 17.6ರ ಅನ್ವಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡ 30ದಿನದೊಳಗೆ ಅಂದರೆ ಜೂ.7ರೊಳಗೆ ಚುನಾವಣಾ ವೆಚ್ಚದ ಲೆಕ್ಕಗಳನ್ನು ಅಫಿಡೆವಿಟ್, ಓಚರ್ಗಳು ಮತ್ತು ಚುನಾವಣೆ ವೆಚ್ಚಗಳ ಕುರಿತು ಬ್ಯಾಂಕ್ ಖಾತೆಯ ವ್ಯವಹಾರದ ತಖ್ತೆ-ಗಳ ವಿವರಗಳನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಇವರಿಗೆ ಸಲ್ಲಿಸಲು ಸೂಚಿಸಲಾಗಿದೆ. ಚುನಾವಣಾ ವೆಚ್ಚದ ಲೆಕ್ಕಪತ್ರ ಸಲ್ಲಿಸದ ಅಭ್ಯರ್ಥಿಗಳ ಹೆಸರುಗಳನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ವರದಿ ಮೂಲಕ ಸಲ್ಲಿಸಲಾಗುವುದೆಂದು ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿ ನಾಗರಾಜ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.