ರಾಯಚೂರು

ಸಿಡಿಲು ಬಡಿದು ಎತ್ತು ಸಾವು

Published On :

ಮುದಗಲ್: ಸಿಡಿಲು ಬಡಿದು ಸುಮಾರು 35 ಸಾವಿರ ಬೆಲೆ ಬಾಳುವ ಎತ್ತು ಸಾವಿಗೀಡಾದ ಘಟನೆ ಸಮೀಪದ ಕಡದರಾಳ ಸೀಮಾದ ಜಮೀನಲ್ಲಿ ಜರುಗಿದೆ. ಬುಧುವಾರ ಸಂಜೆ ಸಿಡಿಲು ಬಡಿದಿದ್ದರಿಂದ ಸ್ಥಳದಲ್ಲೇ ಸಾವಿಗೀಡಾಗಿದೆ. ಎತ್ತು ಪ್ರಕಾಶಪ್ಪ ಕಂಬಳಿ ಎಂಬವವರಿಗೆ ಸೇರಿದ್ದು, ಜಮೀನಿನಲ್ಲಿ ಕಟ್ಟಿಹಾಕಲಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಮಾಲೀಕ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಶು ವೈದ್ಯರು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ಮಾಡಿದ್ದಾರೆ.


ಕಾನೂನು ಸಾಕ್ಷರತಾ ರಥ,  ಸಂಚಾರಿ ನ್ಯಾಯಾಲಯ ಕಾನೂನು ಅರಿವು- ನೆರವು ಕಾರ್ಯಕ್ರಮ
ಕಾನೂನು ಪರಿಪಾಲನೆ ಅಗತ್ಯ: ದ್ಯಾವಪ್ಪ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಮೇ 31
ದೇಶದ ಕಾನೂನಿನ ಬಗ್ಗೆ ಪ್ರತಿಯೊಬ್ಬರು ತಿಳಿವಳಿಕೆ ಹೊಂದುವ ಜೊತೆಗೆ ಅದರ ಪರಿಪಾಲನೆ ಮಾಡುವುದು ಅಗತ್ಯ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ನ್ಯಾ. ಎಸ್.ಬಿ. ದ್ಯಾವಪ್ಪ ಕರೆ ನೀಡಿದರು.
ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲೋಕ್ ಅದಾಲತ್: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿ ಹುಟ್ಟಿದಾಗಿನಿಂದ ಸಾಯುವವರೆಗೆ ಕಾನೂನು ಮತ್ತು ಹಕ್ಕುಗಳು ಅನ್ವಯವಾಗಲಿದ್ದು, ಮನುಷ್ಯನ ಜೀವನದಲ್ಲಿ ವ್ಯಾಜ್ಯ ಮತ್ತು ವಿವಾದಕ್ಕೆ ಗುರಿಯಾಗುವುದು ಸಹಜ. ಇದರ ಪರಿಹಾರಕ್ಕೆ ಕಾನೂನಿನಲ್ಲಿ ಅವಕಾಶವಿದ್ದು, ಲೋಕ್ ಅದಾಲತ್ ಮೂಲಕ ರಾಜೀ ಸಂಧಾನ ಮೂಲಕ ಬಗೆ ಹರಿಸಿಕೊಳ್ಳಬಹುದಾಗಿದೆ.
ಸಮಾಜದಲ್ಲಿ ಸುಖ ದಾಂಪತ್ಯ ಜೀವನಕ್ಕೆ ದೈಹಿಕ ಮತ್ತು ಸಾಮಾಜಿಕವಾಗಿ ಪ್ರಬಲರಾಗುವುದು ಅಗತ್ಯವಾಗಿದ್ದು, ಬಾಲ್ಯ ವಿವಾಹ ಪದ್ಧತಿ ಹಾಗೂ ವರದಕ್ಷಿಣೆಯಂತಹ ಅನಿಷ್ಟ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಇಲ್ಲದಿದ್ದರೆ ನಾಗರಿಕತೆ ಬೆಳೆದಂತೆಲ್ಲ ದುಷ್ಪರಿಣಾಮ ಬೀರಲಿದೆ. ಪ್ರತಿಯೊಬ್ಬರು ಕಾನೂನಿನ ಕುರಿತು ತಿಳಿವಳಿಕೆ ಹೊಂದಿ ಪರಿಪಾಲನೆ ಮಾಡಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಮುದುಕಪ್ಪ ವಕೀಲರು, ಸಹಾಯಕ ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್. ಬಳಬಟ್ಟಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಲ್.ಬಿ. ಸಜ್ಜನ್ ಉಪಸ್ಥಿತರಿದ್ದರು. ಇದೇ ಸಮಯದಲ್ಲಿ ನ್ಯಾಯವಾದಿ ನಾಗರಾಜ ಗಸ್ತಿ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.