ರಾಯಚೂರು

ಹಟ್ಟಿ ಚಿನ್ನದ ಗಣಿ ಕಾರ್ಮಿಕ ಅಮಾನತು: ಟಿಯುಸಿಐ ಖಂಡನೆ

Published On :

ಸಿಂಧನೂರು: ಹಟ್ಟಿ ಚಿನ್ನದ ಗಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದಕ್ಕೆ ಪರಿಹಾರ ಕೋರಿ ಧರಣಿ ನಡೆಸುತ್ತಿದ್ದ ಕಾರ್ಮಿಕ ಮುಖಂಡರನ್ನು ಆಡಳಿತ ಮಂಡಳಿ ಅಮಾನತು ಗೊಳಿಸಿರುವುದನ್ನು ಟಿಯುಸಿಐ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ ತೀವ್ರವಾಗಿ ಖಂಡಿಸಿದ್ದಾರೆ.
  ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಭಾರಿ ಭ್ರಷ್ಟಾಚಾರದಲ್ಲಿ ತೊಡಗಿರುವ ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಹೋರಾಡುತ್ತಿರುವ ಕಾರ್ಮಿಕರ ಐಕ್ಯತೆಯನ್ನು ಬಗ್ಗು ಬಡಿಯಲು ಅಮಾನತು ಅಸ್ತ್ರ ಉಪಯೋಗಿಸಿರುವುದು ಸರಿಯಲ್ಲ. ಎಐಟಿಯುಸಿ ನಾಯಕತ್ವ ಕಾರ್ಮಿಕರ ಅಮಾನತು ಕುರಿತು ಮೌನವಹಿಸಿರುವುದು ಅನುಮಾನಕ್ಕೀಡು ಮಾಡಿದೆ. ಕಂಪನಿ ವಿರುದ್ಧ ಮಾತನಾಡದಿರುವುದು ಅವರಿಗೆ ಬೆಂಬಲಿಸುತ್ತದೆ ಎಂಬುದು ಮೆಲ್ನೋಟಕ್ಕೆ ಕಂಡು ಬರುತ್ತದೆ ಎಂದು ಟೀಕಿಸಿದ್ದಾರೆ.
  ಪ್ರತಿವರ್ಷ ನೂರಾರು ಕೋಟಿ ಲಾಭ ಮಾಡುವ ಕಾರ್ಮಿಕರ ಮನೆಗಳು ಹಂದಿಗೂಡಿನಂತಿವೆ. ಕುಡಿವ ನೀರು, ರಸ್ತೆ, ಶೌಚಾಲಯ, ಚರಂಡಿ ಸೇರಿದಂತೆ ಇತರೇ ಮೂಲಸೌಕರ್ಯಗಳನ್ನು ಕಲ್ಪಿಸದೇ ಪಶುಗಳಂತೆ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದು ಅವರ ಕಾರ್ಮಿಕ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಶರಣ ಪ್ರಕಾಶ ಪಾಟೀಲ್, ಜಿಲ್ಲೆಯ ಶಾಸಕರು ಮಧ್ಯಸ್ಥಿಕೆ ವಹಿಸಿ ಅಮಾನತು ರದ್ದುಗೊಳಿಸಿ, ಕಾರ್ಮಿಕರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಲು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.