ಸೀಮೆಎಣ್ಣೆ ಅಕ್ರಮ ಸಾಗಣೆ: 2 ಬಂಧನ
ಕನ್ನಡಪ್ರಭವಾರ್ತೆ, ಲಿಂಗಸ್ಗೂರು ನ.3
ಅಕ್ರಮವಾಗಿ ಸಾಗಿಸುತ್ತಿದ್ದ ಸೀಮೆಎಣ್ಣೆ ಬ್ಯಾರೆಲ್ ಹಾಗೂ ಟಾಟಾ ಏಸ್ ವಾಹನ ಜಪ್ತಿ ಮಾಡಿ ಈರ್ವರು ವ್ಯಕ್ತಿಗಳನ್ನು ಬಂಧಿಸಿದ ಘಟನೆ ಭಾನುವಾರ ಜರುಗಿದೆ.
ಪಟ್ಟಣದ ಗುಡದನಾಳ ಕ್ರಾಸ್ ಹತ್ತಿರ ಟಾಟಾ ಏಸ್ (ಕೆ.ಎ.36. ಎ.2626) ವಾಹನದಲ್ಲಿ 180 ಲೀಟರ್ನ 4 ಬ್ಯಾರೆಲ್ಗಳಲ್ಲಿ ಸುಮಾರು 8910 ಬೆಲೆ ಬಾಳುವ 540 ಲೀಟರ್ ಸೀಮೆಎಣ್ಣೆ ತುಂಬಿದ ಬ್ಯಾರೆಲ್ಗಳನ್ನು ಜಪ್ತಿ ಮಾಡಲಾಗಿದೆ. ವಾಹನ ಚಾಲಕ ಸುರೇಶ ಹುಲಿಗುಡ್ಡ, ಶರಣಬಸವ ಗುಡದನಾಳ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚನ್ನಬಸವೇಶ್ವರ ಟ್ರೇಡಿಂಗ್ ಕಂಪನಿ ಮಾಲೀಕ ಸ್ವಾಮಿ ಪರಾರಿಯಾಗಿದ್ದು, ಈ ಕುರಿತು ಲಿಂಗಸ್ಗೂರು ಉಪತಹಸೀಲ್ದಾರ್ ಖಾಜಾಹುಸೇನ್ ನೀಡಿದ ದೂರಿನನ್ವಯ ಪಿಎಸ್ಐ ಖಾಜಾಹುಸೇನ್ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.
ಆಕಸ್ಮಿಕ ಕ್ರಿಮಿನಾಶಕ ಸೇವನೆ: ಬಾಲಕಿ ಸಾವು
ರಾಯಚೂರು: ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಕ್ರಿಮಿನಾಶಕ ಆಕಸ್ಮಿಕ ಸೇವನೆಯಿಂದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.
ಮೃತಳನ್ನು ಜ್ಯೋತಿ(1) ಎಂದು ಗುರುತಿಸಲಾಗಿದೆ. ಈಕೆ ಹೊಲದಲ್ಲಿರಿಸಿದ್ದ ಕ್ರಿಮಿನಾಶಕವನ್ನು ನೀರೆಂದು ಭಾವಿಸಿ ಕುಡಿದು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗೆಂದು ಲಿಂಗಸ್ಗೂರು ಮತ್ತು ರಾಯಚೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹಟ್ಟಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವ್ಯಕ್ತಿಯ ಶವ ಪತ್ತೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಮಾಕಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಸುಟ್ಟ ಪರಿಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತನನ್ನು ಗ್ರಾಮದ ಮುದಿಯಪ್ಪ ಎಂದು ಗುರುತಿಸಲಾಗಿದೆ. ಈತ ಮದ್ಯ ವ್ಯಸನಿಯಾಗಿದ್ದು, ಮಾನಸಿಕ ರೋಗಿಯೂ ಆಗಿದ್ದನೆಂದು ಗೊತ್ತಾಗಿದ್ದು, ಈತನ ಪತ್ನಿ ತವರಿಗೆ ತೆರಳಿದ ಗಂಡನ ಮನೆಗೆ ಮರಳಿದಾಗ ಮುದಿಯಪ್ಪನ ಶವ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮುದಗಲ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ
ರಾಯಚೂರು: ಬೆಂಗಳೂರಿನ ನಡೆದ ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯದ ವೇಳೆ ನಗರದಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಮೇಶ್ ಮತ್ತು ಕಿಶೋರ್ ಎಂದು ಗುರುತಿಸಲಾಗಿದೆ. ಇವರು ನಗರದ ಪಟೇಲ್ ರಸ್ತೆಯ ವಾಣಿಜ್ಯ ಮಳಿಗೆಯೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದಾಗ ಮಾಹಿತಿ ದೊರೆತು ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದು, ಬಂಧಿತರಿಂದ 53 ಸಾವಿರ ಜಪ್ತಿ ಮಾಡಿದ್ದಾರೆ. ಈ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

