'ಅನ್ನಭಾಗ್ಯ' ಅಕ್ಕಿ ಕಳ್ಳ ಸಾಗಣೆ: ಲಾರಿ ಜಪ್ತಿ
ಕನ್ನಡಪ್ರಭ ವಾರ್ತೆ ಟಿ ಸಿಂಧನೂರು ಟಿ ನ.8
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಲಾರಿಯೊಂದರಲ್ಲಿ ಕಳ್ಳಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ತಹಸೀಲ್ದಾರ್ ವೆಂಕನಗೌಡ.ಆರ್. ಪಾಟೀಲ್ ನೇತೃತ್ವದ ತಂಡ ದಾಳಿ ನಡೆಸಿ ಸುಮಾರು 360 ಚೀಲ ಅಕ್ಕಿಯನ್ನು ಹಾಗೂ ಗೋದಾಮಿನಲ್ಲಿ ಸಂಗ್ರಹಿಸಿದ್ದ 2000 ಚೀಲ ಅಕ್ಕಿಯನ್ನು ಜಪ್ತಿ ಮಾಡಿಕೊಂಡ ಘಟನೆ ಶುಕ್ರವಾರ ತಾಲ್ಲೂಕಿನ ಶ್ರೀಪುರಂ ಜಂಕ್ಷನ್ನಲ್ಲಿ ನಡೆದಿದೆ.
ಪ್ರಕರಣ: ಗೋದಾಮು ಶ್ರೀಪುರಂಜಂಕ್ಷನ್ನಲ್ಲಿ ಬಿ.ಬಿ. ರತ್ನಂ ಎನ್ನುವವರಿಗೆ ಸೇರಿದ್ದು, ಗೋದಾಮಿನ ಮುಂದೆ ಅಕ್ರಮವಾಗಿ ಅಕ್ಕಿ ತುಂಬಿದ್ದ ಲಾರಿ ನಿಂತಿರುವುದನ್ನು ಪತ್ತೆ ಹಚ್ಚಿ ದಾಳಿ ನಡೆಸಲಾಗಿದೆ. ಈ ಗೋದಾಮನ್ನು ಗುನ್ನೇಶ್ವರರಾವ್ ಎಂಬುವವರಿಗೆ ಬಾಡಿಗೆ ನೀಡಲಾಗಿತ್ತು. ಕಳ್ಳ ಸಾಗಾಣಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತಹಸೀಲ್ದಾರ, ಆಹಾರ ನಿರೀಕ್ಷಕ ಜಮೀರ ಮತ್ತು ಆಹಾರ ಸರಬರಾಜು ಅಧಿಕಾರಿ ಆನಂದ, ಗ್ರಾಮೀಣ ಪಿಎಸ್ಐ ಎಸ್.ಎಂ. ಪಾಟೀಲ್ ಧಾವಿಸಿದರು. ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡರು.
ಸರ್ಕಾರದಿಂದ ಮಂಜುರಾಗಿರುವ ಅನ್ನಭಾಗ್ಯ ಯೋಜನೆ ಅಕ್ಕಿ ಬಡವರಿಗೆ ಮುಟ್ಟಲೆಂದು ನೀಡಿದರೆ ಆ ಅಕ್ಕಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವುದು ಖಂಡನೀಯವಾಗಿದೆ. ಪಡಿತರ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಕಳ್ಳರನ್ನು ಬಂದಿಸಬೇಕು. ಅವರ ಮೇಲೆ ಸಿಒಡಿ ತನಿಖೆ ಕೈಗೊಳ್ಳಬೇಕೆಂದು ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ ಒತ್ತಾಯಿಸಿದರು.
ಕ್ರಮಕ್ಕೆ ಒತ್ತಾಯ: ಸಾವಿರಾರು ಬಡಜನರು ಹೊಟ್ಟಿಗೆ ಗಂಜಿ ಇಲ್ಲದೆ ಬದುಕುತ್ತಿದ್ದಾರೆ. ಆದರೆ ಇವರು ಅಂತವರ ಹೊಟ್ಟೆಯ ಮೇಲೆ ಮಣ್ಣು ಹಾಕಿ ಶ್ರೀಮಂತಿಕೆಯ ಸುಖದ ಭೋಗದಲ್ಲಿ ಮರೆಯುತ್ತಿದ್ದಾರೆ. ಇಂತವರಿಗೆ ತಕ್ಕ ಪಾಠ ಕಲಿಸಿ ಶಾಮೀಲಾದವರಿಗೆ ಕ್ರಮ ಕೈಗೊಳ್ಳಬೇಕೆಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಷುಮಿಯಾ ಆಗ್ರಹಿಸಿದ್ದಾರೆ.
ಈ ಕುರಿತು ತಹಸೀಲ್ದಾರ ವೆಂಕನಗೌಡರನ್ನು ಮಾತನಾಡಿಸಿದಾಗ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅವರು ರಾಜಕೀಯವಾಗಿ ಎಷ್ಟೇ ಪ್ರಬಲರಾಗಿದ್ದರೂ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

