ಮೊಹರಂ: ಸೌಹಾರ್ದಯುತ ಆಚರಣೆಗೆ ಪಿಎಸ್‌ಐ ಮನವಿ
ಲಿಂಗಸ್ಗೂರು: ಹಿಂದೂ-ಮುಸ್ಲಿಮರು ಕೂಡಿ ಆಚರಿಸುವ ಮೊಹರಂ ಹಬ್ಬವನ್ನು ಎಲ್ಲರೂ ಸೌಹಾರ್ದಯುತವಾಗಿ ಆಚರಣೆ ಮಾಡಬೇಕೆಂದು ಪಿಎಸ್‌ಐ ಖಾಜಾಹುಸೇನ್ ಮನವಿ ಮಾಡಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ನ.5 ರಿಂದ 14ರವರೆಗೆ ಮೊಹರಂ ಹಬ್ಬವನ್ನು ಆಚರಿಸಲಾಗುತ್ತದೆ. ಯಾವುದೇ ಧಾರ್ಮಿಕ ಆಚರಣೆಗಳನ್ನು ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸಬೇಕು. ವೈಯಕ್ತಿಕ ಕಾರಣ ಅಥವಾ ಮಧ್ಯ ಸೇವಿಸಿ ಹಬ್ಬದ ದಿನಗಳಲ್ಲಿ ಜಗಳವಾಡುವುದು ಕಂಡು ಬಂದರೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಬೇಕು. ಇದರಿಂದ ಪರಿಹಾರ ಕಂಡುಕೊಂಡು ಶಾಂತಿ ಕಾಪಾಡುವಲ್ಲಿ ಸಹಕಾರಿಯಾಗಲಿದೆ. ಇದಕ್ಕೆ ಎಲ್ಲ ವರ್ಗದ ಮುಖಂಡರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ ಹಾಗೂ ಹಿರಿಯ ಮುಖಂಡ ಲಾಲ್‌ಅಹ್ಮದ್ ಮಾತನಾಡಿ, ತಾಲೂಕಿನಲ್ಲಿ ಹಿಂದೂ-ಮುಸ್ಲಿಮರು ಪ್ರತಿಯೊಂದು ಹಬ್ಬದ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಶಾಂತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಮುಂದೆಯೂ ಎಲ್ಲ ಹಬ್ಬಗಳನ್ನು ಶಾಂತಿಯಿಂದ ಆಚರಿಸುವ ಮೂಲಕ ಲಿಂಗಸ್ಗೂರು ತಾಲೂಕಿಗೆ ಯಾವುದೇ ಕಪ್ಪಚುಕ್ಕೆ ಬಾರದಂತೆ ಕಾಪಾಡಿಕೊಂಡು ಹೋಗಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಮುಖಂಡರಾದ ಪುರಸಭೆ ಸದಸ್ಯರಾದ ಎಂ.ಡಿ.ರಫೀ, ಫಯಾಜ್ ಅಹ್ಮದ್, ಶರಣಗೌಡ ಪಾಟೀಲ್, ಅನೀಸ್ ಪಾಶಾ, ಮುಖಂಡರಾದ ನಿಂಗಪ್ಪ ಪರಂಗಿ, ಜೀವನ್ ಬಾಳೇಗೌಡ, ಶಂಕರಗೌಡ ಸರ್ಜಾಪೂರ, ಶಿವಪ್ಪ ಮಾಚನೂರ ಸೇರಿದಂತೆ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

