ಸಿಎಂ ಸಭೆಯಲ್ಲಿ ಸಮರ್ಪಕ ಮಾಹಿತಿ ನೀಡಿ
ಕ.ಪ್ರ.ವಾರ್ತೆ , ರಾಯಚೂರು , ಅ.8
ಜಿಲ್ಲೆಗೆ ನ.16ರಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದು, ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗುವಂತೆ ಹೆಚ್ಚುವರಿ ಡಿಸಿ ಎಂ. ತಿಮ್ಮಪ್ಪ ಸೂಚಿಸಿದರು.
ಅವರು ನಗರದಲ್ಲಿ ಶುಕ್ರವಾರ ಸಿಎಂ ಭೇಟಿ ಹಿನ್ನೆಲೆ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಗೆ ಪ್ರಥಮ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿಯ ಮಾಹಿತಿ ಕ್ರೂಢೀಕರಿಸಿ ಸಮರ್ಪಕ ದಾಖಲೆಗಳೊಂದಿಗೆ ಸಭೆಗೆ ಹಾಜರಾಗುವಂತೆ ಆದೇಶಿಸಿದರು.
ಸಿಎಂ ಸಿದ್ದರಾಮಯ್ಯ ಅವರು ನಡೆಸುವ ಸಭೆಯಲ್ಲಿ ಯಾವುದೇ ಇಲಾಖೆ ಮಾಹಿತಿಯನ್ನು ಹಾಗೂ ಯಾವುದೇ ವಿಷಯದ ಕುರಿತು ಕೇಳುವ ಮಾಹಿತಿಗೆ ಸಮರ್ಪಕವಾಗಿ ಒದಗಿಸಲು ಅಧಿಕಾರಿಗಳು ಸಜ್ಜಾಗಿರಬೇಕು ಎಂದು ತಿಳಿಸಿದರು.
ಮಾಹಿತಿ ಇರಲಿ: ಜಿಪಂ ಉಪಕಾರ್ಯಯದರ್ಶಿ ಮುಕ್ಕಣ್ಣ ಕರಿಗಾರ್ ಸಭೆಯಲ್ಲಿ ಮಾತನಾಡಿ, ಪ್ರತಿ ಇಲಾಖೆಯೂ ತಮಗೆ ನೀಡಿದ ಅನುದಾನ, ಕಾರ್ಯ ಚಟುವಟಿಕೆ ಪ್ರಗತಿ, ಕ್ರಿಯಾ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಒದಗಿಸಬೇಕು. ಫಲಾನುಭವಿಗಳ ಪಟ್ಟಿ ಇತರ ಮಾಹಿತಿಗಳನ್ನು ತಪ್ಪದೇ ಸಭೆಗೆ ತರಬೇಕು ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ನಗರದ ಜಿಪಂ ಸಭಾಂಗಣದಲ್ಲಿ ನ.16ರಂದು ಬೆಳಗ್ಗೆ 10ಕ್ಕೆ ಸಭೆ ನಡೆಸಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ತಪ್ಪದೇ ಸಭೆಯಲ್ಲಿ ಹಾಜರಿರುವಂತೆ ಅವರು ಆದೇಶಿಸಿ, ಕೃಷಿ, ಸಮಾಜ ಕಲ್ಯಾಣ, ಶಿಕ್ಷಣ, ಮಹಿಳಾ ಮಕ್ಕಳ ಕಲ್ಯಾಣ, ಅನ್ನಭಾಗ್ಯ, ಕ್ಷೀರ ಭಾಗ್ಯ ಯೋಜನೆಗಳ ಮಾಹಿತಿಯನ್ನು ಸಂಗ್ರಹಿಸಿ ಒದಗಿಸುವಂತೆ ಸೂಚಿಸಿದರು.
ಕೆಎಂಎಫ್ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ, ಗಿಣಿಗೇರಾ ಮೆಹಬೂನ ನಗರ ರೈಲು ಮಾರ್ಗ ಕುರಿತಾದ ಭೂಸ್ವಾಧೀನ ಇತ್ಯಾದಿಗಳ ಮಾಹಿತಿಗಳು ಅಗತ್ಯತೆಯ ಬಗ್ಗೆ ಅಪರ ಜಿಲ್ಲಾಧಿಕಾರಿಗಳು ಒತ್ತಿ ಹೇಳಿದರು.
ವಿವಿಧ ಅಭಿವೃದ್ಧಿ ಮಂಡಳಿಗಳು ಸಾಲ ಹಾಗೂ ಸಾಲಮನ್ನಾ ಮಾಹಿತಿ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಕುರಿತು ವರದಿಗಳು, ಗ್ರಾಮೀಣ ರಸ್ತೆ, ಲೋಕೋಪಯೋಗಿ ಇಲಾಖೆಯ ರಸ್ತೆಗಳು, ಜೆಸ್ಕಾಂ, ರು. 100 ಕೋಟಿ ಅನುದಾನದ ಸಿಎಂ ಅಭಿವೃದ್ಧಿ ಕಾಮಗಾರಿಗಳು, ನಗರಾಭಿವೃದ್ಧಿ, ಕೈಗಾರಿಕೆ, ರಾಜ್ಯ ಮಾಲಿನ್ಯ ಮಂಡಳಿ, ನೀರಾವರಿ ಸೇರಿ ಎಲ್ಲ ಇಲಾಖೆಯವರು ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಲು ಸೂಚಿಸಿದರು.
ಅಂತಿಮಗೊಳಿಸಿ: ಮಾನವಿ ತಾಲೂಕಿನ ನವಲಕಲ್, ಹೀರಾ ಇತರೆಡೆಗಳಲ್ಲಿ ಪ್ರೌಢಶಾಲೆಗಳ ಕಟ್ಟಡಗಳ ಉದ್ಘಾಟನೆ ಕುರಿತಾ ಮಾಹಿತಿಗಳನ್ನು ಶಾಸಕರೊಂದಿಗೆ ಸಮಾಲೋಚಿಸಿ ಅಂತಿಮಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.
ಅದೇ ರೀತಿ ಗೋನಾಳ, ಪೋತ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು ಶಾಸಕರೊಂದಿಗೆ ಚರ್ಚಿಸಲು ಡಿಎಚ್ಒ ಡಾ.ನಾರಾಯಣಪ್ಪ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಸಿಪಿಒ ಡಾ. ರೋಣಿ ಹಾಗೂ ಪೊಲೀಸ್ ಅಧಿಕಾರಿಗಳಾದ ಚಂದ್ರಶೇಖರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿದ್ದಲಿಂಗಯ್ಯ ಸೇರಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

