'ಕೆಜೆಪಿ ಧರಣಿಗೆ ಜಿಲ್ಲೆಯಿಂದ ನಿಯೋಗ'
ಸಿಂಧನೂರು: ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶಾದಿಭಾಗ್ಯ ಯೋಜನೆಯ ವಿಸ್ತರಿಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನಾ ಧರಣಿಯಲ್ಲಿ ರಾಯಚೂರು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ನಿಯೋಗ ತೆರಳಿ ಪಾಲ್ಗೊಳ್ಳುವುದಾಗಿ ಕೆಜೆಪಿ ಜಿಲ್ಲಾಧ್ಯಕ್ಷ ವೆಂಕನಗೌಡ ಮಲ್ಕಾಪುರ ಹೇಳಿದರು.
ನಗರದ ಕೆಜೆಪಿ ಕಾರ್ಯಾಲಯದಲ್ಲಿ ಶನಿವಾರ ಜಿಲ್ಲಾ ಕಾರ್ಯಕರ್ತರ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಶಾದಿ ಭಾಗ್ಯ ಯೋಜನೆ ಇಡೀ ರಾಜ್ಯಕ್ಕೆ ಕೇವಲ ಸಾವಿರ ಜನರಿಗೆ ಮಾತ್ರ ಸರಿಯಲ್ಲ. ಬದಲಾಗಿ ಎಲ್ಲಾ ವರ್ಗದ, ಸಮುದಾಯಗಳ ಜನರಿಗೂ ಈ ಯೋಜನೆ ತಲುಪಲಿ. ಬಿಪಿಎಲ್ ಕಾರ್ಡ್ಗಳ ತಾರತಮ್ಯ ನಿಲ್ಲಲಿ ಎಂಬ ಮಹತ್ವದ ಬೇಡಿಕೆಗಳನ್ನಿಟ್ಟುಕೊಂಡು ಯಡಿಯೂರಪ್ಪನವರು ಹಮ್ಮಿಕೊಂಡಿದರುವ ಪ್ರತಿಭಟನಾ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಈ ಬಗ್ಗೆ ಕಾರ್ಯಕರ್ತರ ಸಭೆಯಲ್ಲಿ ಚರ್ಚಿಸಿ ನ. 20ರಂದು ಬೆಂಗಳೂರಿಗೆ ತೆರಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ತೀರ್ಮಾನ: ನ.24 ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯದಲ್ಲೂ ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಗಿದೆ. ಕಾರ್ಯಕರ್ತರು ತಪ್ಪದೇ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು.
ಕೆಜೆಪಿ ಮುಖಂಡ ರಾಜಶೇಖರ ಪಾಟೀಲ್, ಕೆಜೆಪಿ ಮುಖಂಡ ಮಹಾದೇವಪ್ಪಗೌಡ ಮಸ್ಕಿ ಮಾತನಾಡಿದರು.
ಮುಖಂಡರಾದ ಶಂಕರಗೌಡ ಹರವಿ, ಗಂಗಾಧರ ನಾಯಕ ಮಾನ್ವಿ, ಬಸವರಾಜ ಕಳಸ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

