ರಾಯಚೂರು

ದುರ್ಬಲರಿಗೆ ಕಾನೂನಿನ ನೆರವು ಅಗತ್ಯ: ನ್ಯಾ. ರಾಯಣ್ಣವರ್

Published On :

ಸಿಂಧನೂರು: ಸಮಾಜದಲ್ಲಿ ಅನ್ಯಾಯಕ್ಕೊಳಗಾದವರು, ದುರ್ಬಲರು, ಅಶಕ್ತರಿಗೆ ಕಾನೂನಿನ ನೆರವು ಅಗತ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಎಸ್. ರಾಯಣ್ಣವರ ಹೇಳಿದರು.
ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ಕಾನೂನು ಸೇವೆಗಳ ದಿನಾಚರಣೆಯ ಕಾನೂನು ಅರಿವು ನೆರವು ಸಪ್ತಾಹವನ್ನು ಉದ್ಭಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅವಶ್ಯವೆಂದರಿತು ಕಾನೂನು ಸೇವೆಗಳ ಪ್ರಾಧಿಕಾರವನ್ನು ಸರ್ಕಾರ ಜಾರಿಗೆತಂದಿತು. ಅದರನ್ವಯ ಪರಿಶಿಷ್ಟ ಜಾತಿ, ಪಂಗಡ, ಭೂಕಂಪ ಪೀಡಿತರು, ಶೋಷಿತರು, ಮಹಿಳೆಯರು, ದೌರ್ಜನ್ಯಕ್ಕೊಳಗಾದ ಅಶಕ್ತರಿಗೆ ಕಾನೂನಿನ ನೆರವು ನೀಡಲು ಕಾನೂನು ಸೇವಾ ಸಮಿತಿಗಳು ರಾಜ್ಯದಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ವಕೀಲರು ಇಂತಹ ಸೇವಾ ಕಾರ್ಯಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.
ನ್ಯಾಯವಾದಿ ಟಿ.ರಾಜಶೇಖರಯ್ಯ, ಸಹಾಯಕ ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರು ಮಾತನಾಡಿದರು. ಸಂಘದ ಅಧ್ಯಕ್ಷ ಕೆ. ಭೀಮನಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಿರುಪಾದೆಪ್ಪ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅನೇಕ ನ್ಯಾಯವಾದಿಗಳು, ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.