ಇಂದು ವಸ್ತು ಪ್ರದರ್ಶನ ಮೇಳ
ಮಸ್ಕಿ: ಪಟ್ಟಣದ ಸಮರ್ಥ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನ.11 ರಂದು ಟ್ರೆಂಡ್ಸ್ ಟುಮಾರೋ ವಸ್ತು ಪ್ರದರ್ಶನ ಮೇಳ ಮತ್ತು ನ.12 ರಂದು ನೂತನ ಮಹಿಳಾ ಪದವಿ ಕಾಲೇಜಿನ ಅಡಿಗಲ್ಲು ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ವೀರಭದ್ರ ಮಹಾಸ್ವಾಮಿಗಳು ಅಂಕಲಿಮಠ, ರುದ್ರಮುನಿ ದೇವರು ಗಚ್ಚಿನ ಹಿರೇಮಠ ಮಸ್ಕಿ ವಹಿಸಲಿದ್ದಾರೆ. ಉದ್ಘಾಟನೆ ಶಾಸಕ ಪ್ರತಾಪಗೌಡ ಪಾಟೀಲ್ ನೆರವೇರಿಸಲಿದ್ದಾರೆ. ಗುಲ್ಬರ್ಗದ ಹೈ-ಕ ಶಿ. ಸಂಸ್ಥೆ ಅಧ್ಯಕ್ಷ ಶಶೀಲ್ ನಮೋಶಿ, ಕೊಪ್ಪಳ ಸಂಸದ ಶಿವರಾಮೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆ ಷಡಕ್ಷರಪ್ಪ ಬಾಳೇಕಾಯಿ ವಹಿಸುವರು. ಮಹಿಳಾ ಪದವಿ ಕಾಲೇಜಿನ ಅಡಿಗಲ್ಲು ಸಮಾರಂಭದ ಶಂಕುಸ್ಥಾಪನೆಯನ್ನು ಅಬಕಾರಿ ಸಚಿವ ಸತೀಶ ಜಾರಕಿಹೊಳಿ ನೆರವೇರಿಸುವರು. ಶಾಸಕ ಪ್ರತಾಪಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಹಾಗೂ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಪಾಲ್ಗೊಳ್ಳಲಿದ್ದಾರೆ.
ಮಕ್ಕಳ ದಿನಾಚರಣೆ: 13ರಂದು ಸ್ಪರ್ಧೆ
ರಾಯಚೂರು: ನಗರದ ದೃಶ್ಯ ಲಲಿತಕಲಾ ಅಕಾಡೆಮಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.13ರಂದು ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 13ರಂದು ಬೆಳಗ್ಗೆ 10 ಗಂಟೆಗೆ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಈ ಸ್ಪರ್ಧೆ ನಡೆಯಲಿದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಎಲ್ಲ ವಿಭಾಗಗಳಲ್ಲಿ ಪ್ರತ್ಯೇಕ ಮೂರು ಬಹುಮಾನಗಳನ್ನು ವಿತರಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಅಕಾಡೆಮಿಯಿಂದಲೇ ಡ್ರಾಯಿಂಗ್ ಹಾಳೆ ಮಾತ್ರ ಒದಗಿಸಲಾಗುತ್ತದೆ. ಬಣ್ಣ ಮತ್ತಿತರೆ ಸಾಮಗ್ರಿಗಳನ್ನು ವಿದ್ಯಾರ್ಥಿಗಳೇ ತರಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅಕಾಡೆಮಿ ಮನವಿ ಮಾಡಿದೆ.
ಕರವೇ ಅಧ್ಯಕ್ಷರಾಗಿ ಇಂದುಮತಿ ಆಯ್ಕೆ
ಸಿಂಧನೂರು: ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ತಾಲೂಕ ಮಹಿಳಾ ಘಟಕದ ಅಧ್ಯಕ್ಷರಾಗಿ ಇಂದುಮತಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲೂಕಾಧ್ಯಕ್ಷ ಅಜಿತ್ ಓಸ್ತುವಾಲ್ ತಿಳಿಸಿದ್ದಾರೆ. ಈ ಮುಂಚೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮೀ ಪತ್ತಾರ ರಾಜಿನಾಮೆ ನೀಡಿದ ಪ್ರಯುಕ್ತ ಅವರ ಸ್ಥಾನಕ್ಕೆ ಇಂದುಮತಿ ನೇಮಕವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

