ಗುಂಪುಗೂಡಿ ಮೊಹರಂ ಆಚರಣೆ ನಿಷೇಧ
ರಾಯಚೂರು: ಜಿಲ್ಲೆಯ ಕೆಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಮೊಹರಂ ಹಬ್ಬವನ್ನು ಶಾಂತಿ ಸುವ್ಯವಸ್ಥೆ ಆಚರಣೆ ಉದ್ದೇಶದಿಂದ ಗುಂಪಾಗಿ ಆಚರಿಸುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಮಾನವಿ ತಾಲೂಕಿನ ಹಿರೇಬಾದರದಿನ್ನಿ, ಸಿಂಧನೂರು ತಾಲೂಕಿನ ಸಿಂಗಾಪುರ, ಅರಳಹಳ್ಳಿ ಮತ್ತು ಲಿಂಗಸ್ಗೂರು ತಾಲೂಕಿನ ಹಟ್ಟಿಯಲ್ಲಿ ಮೊಹರಂ ಹಬ್ಬವನ್ನು ಗುಂಪು ಗುಂಪಾಗಿ ಆಚರಿಸದಂತೆ ಜಿಲ್ಲಾಡಳಿತ ಸೂಚಿಸಿದ್ದು, ಸಾರ್ವಜನಿಕ ಮೆರವಣಿಗೆ ಮತ್ತು ಕಾನೂನು ಬಾಹಿರ ಚಟುವಟಿಕೆ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಆದೇಶ ಹೊರಡಿಸಿದ್ದಾರೆ.
ಕೋಳಿ ಸಾಕಾಣಿಕೆ ತರಬೇತಿಗೆ ಕರೆ
ರಾಯಚೂರು: ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ಬಾಗಲಕೋಟವತಿಯಿಂದ ಮೂರು ದಿನಗಳ ಕೋಳಿ ಸಾಕಾಣಿಕೆ ತರಬೇತಿ ಶಿಬಿರ ನವೆಂಬರ್ನಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಕರೆಯಲಾಗಿದೆ.ಶಿಬಿರದಲ್ಲಿ ಆಧುನಿಕ ಪದ್ಧತಿಗಳು, ಸಂಸ್ಕರಣಾ ಕ್ರಮಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಆಸಕ್ತ ರೈತರು ಹಾಗೂ ರೈತ ಮಹಿಳೆಯರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳೊಂದಿಗೆ ನ.16 ರೊಳಗೆ ಕೇಂದ್ರ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟ-ಇಲ್ಲಿಗೆ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 9164446886 ಇಲ್ಲಿಗೆ ಸಂಪರ್ಕಿಸಬಹುದು.
ಹಣ ಮಂಜೂರಿಗೆ ಸಮಿತಿ ಆಗ್ರಹ
ಸಿಂಧನೂರು: ತಾಲೂಕಿನ ರಾಮತ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿ ಜಾಲವಾಡಗಿ ಗ್ರಾಮಕ್ಕೆ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಮಂಜೂರಾದ ಮನೆಗಳನ್ನು ಕಟ್ಟಿಸಿಕೊಳ್ಳಲು ಯೋಜನೆಯ ಫಲಾನುಭವಿಗಳಿಗೆ ಹಣ ಮಂಜೂರು ಮಾಡುವಂತೆ ಆಗ್ರಹಿಸಿ ಹೈ-ಕ ದಲಿತ ಹಿತರಕ್ಷಣಾ ಸಮಿತಿಯು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಫಲಾನುಭವಿಗಳು ತಮಗೆ ಮನೆ ಮಂಜೂರಾಗಿದೆ ಎಂದು ಇದ್ದ ಮನೆಯನ್ನು ಕೆಡವಿ ಬುನಾದಿ ಹಾಕಿ ಪಿಡಿಒ ಹಾಗೂ ನೋಡಲ್ ಅಧಿಕಾರಿಗಳನ್ನು ಕರೆಯಿಸಿ ತಮ್ಮ ಮನೆಗಳನ್ನು ಜಿಪಿಎಸ್ ಮಾಡಿಸಿಕೊಂಡಿದ್ದು, ಒಂದು ವರ್ಷ ಕಳೆದರೂ ಹಣ ಬಿಡುಗಡೆಯಾಗದ ಕಾರಣ ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಕಾರಣ ಶೀಘ್ರವೇ ಹಣ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

