'ನಗರಕ್ಕೆ ಎಸ್ಯುಎಸ್ಐಪಿ ಯೋಜನೆ ಅವಶ್ಯ'
ಸಿಂಧನೂರು: ಸಾರ್ವಜನಿಕರಿಗೆ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ (ಎನ್ಕೆಎಸ್ಯುಎಸ್ಐಪಿ) ಯೋಜನೆ ಮಾಹಿತಿ ಅವಶ್ಯ ಎಂದು ಎನ್ಕೆಎಸ್ಯುಎಸ್ಐಪಿ ಯೋಜನಾಧಿಕಾರಿ ಸಿ.ನಾಗರಾಜ ಹೇಳಿದರು.
ನಗರದ ಒಳಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆಯ ಎಡಿಬಿ ನೆರವಿನ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ವಾರ್ಡ್ ಮಟ್ಟದಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಕುರಿತು ತಿಳಿವಳಿಕೆ ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿರಂತರ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯಿಂದಾಗಿ ನಗರದಲ್ಲಿರುವ ಎಲ್ಲರಿಗೂ ಇರುವ ನೀರಿನ ಮಹತ್ವ ಹಾಗೂ ನೀರಿನ ಸಮಸ್ಯೆಗಳ ಬಗ್ಗೆ ಹಾಗೂ ಅಭಿವೃದ್ಧಿ ಹೊಂದುತ್ತಿರುವ ನಗರಕ್ಕೆ ಎನ್ಕೆಎಸ್ಯುಎಸ್ಐಪಿ ಯೋಜನೆ ಅವಶ್ಯಕತೆ ಎಷ್ಟಿದೆ ಎಂದು ವಿವರಿಸಿದರು.
ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸೈಯದ ಜಾಫರ ಅಲಿ ಜಾಗೀರದಾರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಗರಸಭೆ ಸದಸ್ಯ ಚಂದ್ರಶೇಖರ ಮೈಲಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪೌರಾಯುಕ್ತ ಸೈಯದ ನಾಸೀರ ಅಲಿ, ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಂಗಾಧರ ನಿರಂತರ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯಿಂದಾಗಿ ನಗರದಲ್ಲಿ ಮುಂದಿನ ದಿನಮಾನಗಳಲ್ಲಿ ಆಗುವಂತಹ ಕಾಮಾಗಾರಿಗಳ ಕುರಿತಾಗಿ ಹಾಗೂ ಯೋಜನೆಗಳ ಉಪಯುಕ್ತತೆ ಕುರಿತಾಗಿ ಮಾಹಿತಿ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ನಗರಸಭೆ ಸದಸ್ಯ ಚಂದ್ರಶೇಖರ ಮೈಲಾರ ಮಾತನಾಡಿರು. ನಗರಸಭೆ ಸದಸ್ಯರಾದ ಸೈಯದ ಹಾಜಿ ಮಸ್ತಾನ್, ಮುಖಂಡ ಜಗದೀಶ, ಮಹಿಳಾ ಒಕ್ಕೂಟದ ಮುಖಂಡರು, ಪ್ರೇಮಲತಾ ಹಾಗೂ ಕನ್ನಡ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಸೈಯದ್ ರಬ್ಬಾನಿ ಜಾಗೀರದಾರ, ಮುಖಂಡ ಸರದಾರ ಬಾಬು, ವ್ಯವಸ್ಥಾಪಕ ಗುರುರಾಜ ಸೌದಿ ಇದ್ದರು.
ಯೋಜನೆ ಸಿಬ್ಬಂದಿ, ಸ್ವಸಹಾಯ ಗುಂಪಿನ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ವಂದನಾ ಪ್ರಾರ್ಥಿಸಿದರು. ಶಾಂತಮುತ್ತಯ್ಯ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

