ಮಕ್ಕಳ ಬೋಧನಾ ಶುಲ್ಕ ಪಾವತಿಸದ ಸರ್ಕಾರ
ಸಿಂಧನೂರು: ಕಡ್ಡಾಯ ಶಿಕ್ಷಣ ಕಾಯ್ದೆಯಡಿ ತಾಲೂಕಿನ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2012- 13ನೇ ಶೈಕ್ಷಣಿಕ ಸಾಲಿನಲ್ಲಿ 261 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಸರ್ಕಾರ 180 ವಿದ್ಯಾರ್ಥಿಗಳ ಬೋಧನಾ ಶುಲ್ಕ ಮಾತ್ರ ಪಾವತಿಸಿದೆ. ಇದು ಶಾಲಾ ಆಡಳಿತ ಮಂಡಳಿ ಹಾಗೂ ಪಾಲಕರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ ಎಂದು ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ವೈ.ನರೇಂದ್ರನಾಥ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ ಶಿಕ್ಷಣ ಇಲಾಖೆಯ ಮಾರ್ಗದರ್ಶನದಂತೆ 2012- 13ನೇ ಸಾಲಿನಲ್ಲಿ ಒಟ್ಟು 261 ಮಕ್ಕಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ 180 ವಿದ್ಯಾರ್ಥಿಗಳಿಗೆ ಮಾತ್ರ ಮಾನ್ಯತೆ ನೀಡಿರುವ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ನೀಡಿ ಅಷ್ಟೇ ಸಂಖ್ಯೆಯ ಮಕ್ಕಳ ಶುಲ್ಕವನ್ನು ಮಾತ್ರ ಪಾವತಿಸಿದೆ. ಆದರೆ ಇನ್ನೂ 81 ವಿದ್ಯಾರ್ಥಿಗಳನ್ನು ಅತಂತ್ರ ಸ್ಥಿತಿಗೆ ನೂಕಿದೆ ಎಂದು ಟೀಕಿಸಿದರು.
ಸರ್ಕಾರದ ಬೇಜವಾಬ್ದಾರಿ: ಒಕ್ಕೂಟದ ಅಧ್ಯಕ್ಷ ಕೆ.ಮಲ್ಲನಗೌಡ ಮಾತನಾಡಿ, ಕಡ್ಡಾಯ ಶಿಕ್ಷಣ ಜಾರಿಗೊಳಿಸಿದ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಒತ್ತಡ ಹೇರಿ ಇದೀಗ ಸಹಕಾರ ನೀಡದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. 2013-14ನೇ ಸಾಲಿನಲ್ಲಿ ಈ ಕಾಯ್ದೆಯಡಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಬೋಧನಾ ಶುಲ್ಕದ ಪ್ರಥಮ ಕಂತು ಸಹ ಸಂದಾಯ ಮಾಡಿಲ್ಲ. ಕಾರಣ ಶಿಕ್ಷಣ ಇಲಾಖೆಯು ತಿರಸ್ಕರಿಸಿದ ಕಳೆದ ಸಾಲಿನ 80 ವಿದ್ಯಾರ್ಥಿಗಳ ಯಾದಿಯನ್ನು ಆಯಾ ಶಾಲೆಗಳಿಗೆ ಹಾಗೂ ಪಾಲಕರಿಗೆ ನೀಡಿ ಗೊಂದಲ ನಿವಾರಿಸಬೇಕು. ಇಲ್ಲವಾದಲ್ಲಿ ಮುಂದಿನ ತರಗತಿಗೆ ಆ ವಿದ್ಯಾರ್ಥಿಗಳಿಗೆ ಬಡ್ತಿ ನೀಡದೆ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು. ಒಕ್ಕೂಟದ ಸಲಹಾ ಮಂಡಳಿ ಸದಸ್ಯರಾದ ಡಾ. ಕೆ.ಶಿವರಾಜ, ಆರ್.ಸಿ. ಪಾಟೀಲ್, ಎಸ್.ಬಸವರಾಜ, ಗುನ್ನೇಶ್ವರರಾವ್, ಪ್ರಕಾಶ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

