ರಾಯಚೂರು

ಖರ್ಗೆ ಸ್ವಾರ್ಥ ರಾಜಕಾರಣಿ: ರೇವುನಾಯಕ

Published On :

ಗುಲ್ಬರ್ಗ/ಶಹಾಬಾದ್: ಹೈ-ಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಕಲಂ 371(ಜೆ) ಜಾರಿ, ಇಎಸ್ಐ ಆಸ್ಪತ್ರೆ ಸ್ಥಾಪನೆಗೆ ನಾನೇ ಕಾರಣ ಎಂದು ಹೇಳಿಕೊಳ್ಳುತ್ತಿರುವ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಒಬ್ಬ ಸ್ವಾರ್ಥ ರಾಜಕಾರಣಿ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಛೇಡಿಸಿದರು.
ವಾಡಿ ಪಟ್ಟಣದ ಹಿಂಗುಲಾಂಬಿಕಾ ಮಂದಿರದಲ್ಲಿ ಹಮ್ಮಿಕೊಂಡ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 371(ಜೆ)ನೇ ಕಲಂ ತಿದ್ದುಪಡಿಗೆ ಅಂಕಿತ ಹಾಕದಿದ್ದರೆ ಜಾರಿಯಾಗುತ್ತಿತ್ತೆ ಎಂದು ಪ್ರಶ್ನಿಸಿ, ಎಲ್ಲವೂ ನಾನೇ ಮಾಡಿದ್ದು ಎಂದು ಹೇಳಿಕೊಳ್ಳುತ್ತ ಸನ್ಮಾನ ಮಾಡಿಸಿಕೊಳ್ಳುತ್ತಿರುವ ಖರ್ಗೆಯವರು, ಹಲವು ವರ್ಷಗಳಿಂದ ಸತತ ಹೋರಾಟ ನಡೆಸಿದ ಹೋರಾಟಗಾರರಿಗೆ ಅವರಿಗೆ ಶಕ್ತಿಯಾಗಿ ನಿಂತ ಹೈ.ಕ. ಭಾಗದ ಜಿಲ್ಲೆಗೆ ಜನತೆಗೆ ದ್ರೋಹ ಬಗೆಯುತ್ತಿದ್ದಾರೆಂದು ಆರೋಪಿಸಿದರು.
ಬಿಜೆಪಿ ಅಭ್ಯರ್ಥಿ ಬೆಂಬಲಿಸಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾಗಬೇಕೆಂಬ ಗಮನದಲ್ಲಿಟ್ಟುಕೊಂಡು ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕೆಂದು ಕರೆ ನೀಡಿದರು. ಮಾಜಿ ಶಾಸಕ ವಾಲ್ಮೀಕಿ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ತಳವಾರ, ಮುಕುಂದ ದೇಶಪಾಂಡೆ ಮಾತನಾಡಿದರು.
ವಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ ಸೂರ್ಯವಂಶಿ, ತಾಲೂಕು ಬಿಜೆಪಿ ಅಧ್ಯಕ್ಷ ಶಶಿಕಾಂತ ಪಾಟೀಲ್ ಬೆಳಗುಂಪ, ನೀಲಯ್ಯಸ್ವಾಮಿ, ಸಿದ್ಧಣ್ಣ ಕಲಶೆಟ್ಟಿ, ಹಣಮಂತ ಚವ್ಹಾಣ ಕಡಬೂರ್, ಈರಣ್ಣ ರಾವೂರಕರ್, ಠಾಕೂರಸಿಂಗ್ ರಾಠೋಡ, ಯಮನಪ್ಪ ನವನಳ್ಳಿ, ಮಲ್ಲೇಶಿ ಭಂಡಾರಿ, ಪುರಸಭೆ ಸದಸ್ಯರಾದ ಗಿರಿಮಲ್ಲಪ್ಪ ಕಟ್ಟಿಮನಿ, ಪ್ರಕಾಶ ನಾಯಕ, ಅಶೋಕ ಪವಾರ, ಕಿಶನ್ ಜಾಧವ, ಬಸವರಾ ಕಿರಣಗಿ ಮುಂತಾದವರು ಉಪಸ್ಥಿತರಿದ್ದರು. ಸಭೆಗೂ ಮುಂಚೆ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಸಲಾಯಿತು.
ಭಾಷಣ ಟಿಕೆಟ್ ವಿತರಣೆ: ವಾಡಿ ಪಟ್ಟಣದ ಗಾಂಧೀಜಿ ವೃತ್ತದಲ್ಲಿ ಮಾಜಿ ಶಾಸಕ ವಾಲ್ಮೀಕಿ ನಾಯಕ ಬೆಂಗಳೂರಿನಲ್ಲಿ ನ.17ರಂದು ನಡೆಯಲಿರುವ ಮೋದಿ ಭಾಷಣ ಕೇಳಲು ಪಡೆಯುವ 10 ಮೌಲ್ಯದ ಟಿಕೆಟ್ ವಿತರಣೆಗೆ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.