ಮಹಾತ್ಮರಲ್ಲಿ ಬಾಳದೀಪ ಬೆಳಗಿಸುವ ಶಕ್ತಿ: ವೀರಣ್ಣ
ಕನ್ನಡಪ್ರಭ ವಾರ್ತೆ ಟಿ ಸಿಂಧನೂರು ಟಿ ನ.15
ಮಹಾತ್ಮರು ಪ್ರಾತಃಸ್ಮರಣೀಯರು. ಮಹಾತ್ಮರನ್ನು ನೆನೆಯುವುದೇ ಘನಫಲ. ಎಲ್ಲರ ಬಾಳಲ್ಲಿ ನಂದಾದೀಪವನ್ನು ಬೆಳಗಿಸುವ ಶಕ್ತಿ ಅವರಲ್ಲಿದೆ ಎಂದು ಉಪನ್ಯಾಸಕ ವೀರಣ್ಣ ಹಂಪರಗುಂದಿ ಹೇಳಿದರು.
ಬಳಗಾನೂರ ಗ್ರಾಮದ ದೇವಾಂಗ ಸಮಾಜದ ವತಿಯಿಂದ ದೇವಾಂಗ ದೇವಲ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ದೇವಲ ಮಹರ್ಷಿ ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದರು. ವಿಶ್ವಕ್ಕೆ ಮಾರ್ಗದರ್ಶಕರಾಗಿ ಅನೇಕ ವಚನಗಳನ್ನು ರಚಿಸಿದರು. ಅವರ ಆಚಾರ- ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಉಪನ್ಯಾಸಕ ಎಚ್.ಸುರೇಶ, ಪ್ರೊ. ಮಾನಪ್ಪ ಮಸ್ಕಿ, ಡಾ.ಎಸ್.ಎಸ್. ಜಾಗೀರದಾರ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಮಲ್ಲಿಕಾರ್ಜುನ ಸ್ವಾಮೀಜಿ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಗುತ್ತೇದಾರ, ಉಪಾಧ್ಯಕ್ಷ ಎಚ್.ಮಹಾಬಳೇಶ, ದೇವಾಂಗ ಸಮಾಜದ ಅಧ್ಯಕ್ಷ ಅಮರಪ್ಪ ಜೀರಾಳ, ಬಸವರಾಜಪುಟ್ಟಿ, ಮಾರುತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮರಿಯಪ್ಪ ಅಂಬ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೆಂದ್ರ ಕುಲಕರ್ಣಿ, ಗ್ರಾಪಂ ಸದಸ್ಯ ಹನುಮೇಶ ಹೂಗಾರ, ಮುಖಂಡರಾದ ಎಂ.ಡಿ ಆಲಂಸಾಬ ಸೇರಿದಂತೆ ಸಮಾಜದ ಮುಖಂಡರು ಯುವಕ ಮಂಡಳಿಯ ಪದಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಚೌಡೇಶ್ವರಿಗೆ ವಿಶೇಷ ಪೂಜೆ, ಸಕಲ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಾಂಗ ದೇವಲ ಮಹರ್ಷಿ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಸುಮಂಗಲೆಯರ ಕಳಸ ಕನ್ನಡಿಗಳನ್ನು ಹಿಡಿದು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಸನ್ಮಾನ: ಸಮಾಜದ ವತಿಯಿಂದ ದೇವಾಂಗ ಸಮಾಜದ ಹಿರಿಯರು, ಸ್ವಾತಂತ್ರ್ಯ ಹೋರಾಟಗಾರ ರಾಮಚಂದ್ರಪ್ಪ ಗಂಗಾವತಿ ಸೇರಿದಂತೆ ಗಣ್ಯರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

