ರಾಯಚೂರಿನಲ್ಲೂ ರಥಯಾತ್ರೆ
ಕ.ಪ್ರ.ವಾರ್ತೆ ರಾಯಚೂರು ನ.16
ಶಿಕ್ಷಣ ಪದ್ಧತಿಯು ಅಸಮಾನತೆ ಹಾಗೂ ತಾರತಮ್ಯದ ಕೂಪವಾಗಿದೆ ಎಂದು ಆರೋಪಿಸಿರುವ ಜಯಕರ್ನಾಟಕ ಸಂಘಟನೆಯು ಆರಂಭಿಸಿರುವ ಸಮಾನ ಮತ್ತು ಏಕರೂಪ ಶಿಕ್ಷಣ ನೀತಿ ಜಾರಿಗಾಗಿನ ಜಾಗೃತಿ ಜನಾಂದೋಲನ ರಥಯಾತ್ರೆಯು ಶನಿವಾರ ನಗರದಲ್ಲಿ ಸಂಚರಿಸಿತು.
ನಗರದ ರಂಗಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ರಥಯಾತ್ರೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರವು ಶಿಕ್ಷಣದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಬಡವರ ಮಕ್ಕಳು ಮಾತ್ರ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುವಂತಾಗಿದೆ.ಶ್ರೀಮಂತರ ಮಕ್ಕಳಿಗೆ ಆಂಗ್ಲ ಮಾಧ್ಯಮ ದಕ್ಕುವಂತೆ ಸರ್ಕಾರವೇ ವ್ಯವಸ್ಥೆ ಕಲ್ಪಿಸಿದೆ ಎಂದು ಆರೋಪಿಸಿದರು.
ಎಲ್ಲ ಮಕ್ಕಳು ತಮ್ಮ ನೆರೆಹೊರೆಯ ಮಕ್ಕಳೊಂದಿಗೆ ಸಮಾನ ಶಾಲೆಯಲ್ಲಿ ಮಾತೃಭಾಷೆಯಲ್ಲಿಯೇ ಶಿಕ್ಷಣ ಪಡೆದರೆ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಪರಿಕಲ್ಪನೆಗೆ ಬೆಲೆ ಬರುತ್ತದೆ. ಆದರೆ ಶಿಕ್ಷಣ ಕ್ಷೇತ್ರವು ದಿನದಿಂದ ದಿನಕ್ಕೆ ವ್ಯಾಪಾರೀಕರಣಗೊಳ್ಳುತ್ತಿದೆ ಎಂದು ದೂರಿದರು.
ರಥಯಾತ್ರೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಶಿವಕುಮಾರ್ ಯಾದವ್, ಜಿಲ್ಲಾ ಕಾರ್ಯಾಧ್ಯಕ್ಷ ಧರ್ಮರಾಜ್ ಶಕ್ತಿನಗರ ಸೇರಿದಂತೆ ನೂರಾರು ಕಾರ್ಯಕರ್ತರು ರಥಯಾತ್ರೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

