ರಾಯಚೂರು

ಸುದ್ದಿ ಸಂಕ್ಷೇಪ

Published On :

ಮೂಢನಂಬಿಕೆ
ಪ್ರತಿಬಂಧಕ ಕಾಯಿದೆ ಜಾರಿಗೆ ಆಗ್ರಹ
ರಾಯಚೂರು: ಸಮಾಜದಲ್ಲಿ ಬೇರೂರಿರುವ ಹತ್ತು ಹಲವು ಮೂಢ ಆಚರಣೆಗಳನ್ನು ನಿಷೇಧಿಸುವ ಸಮರ್ಪಕ ಕಾನೂನು ಜಾರಿಗೆಗೆ ಎಐಡಿಎಸ್ ಸಂಘಟನೆ ಒತ್ತಾಯಿಸಿದೆ. ಈ ಕುರಿತು ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ್ ಚೀಕಲಪರ್ವಿ ಪ್ರಕಟಣೆ ನೀಡಿ, ಪ್ರಾಣಿಬಲಿ, ಬೆತ್ತಲೆ ಸೇವೆ, ವಾಮಾಚಾರ, ವಶೀಕರಣದಂಥ ಮೌಢ್ಯಗಳು ಸಮಾಜದಲ್ಲಿ ಹೆಚ್ಚಾಗಿವೆ. ವೈಯಕ್ತಿಕ ನೆಲೆಗಟ್ಟಿನಲ್ಲಿ ಧಾರ್ಮಿಕ ನಂಬಿಕೆಗಳನ್ನು ಆಚರಿಸುವುದು ಜನರ ಆಯ್ಕೆಗೆ ಬಿಟ್ಟದ್ದು. ಆದರೆ ಧರ್ಮ, ಪರಂಪರೆ ಹೆಸರಿನಲ್ಲಿ ಅಮಾಯಕರನ್ನು ಸುಲಿಗೆ ಮಾಡುವ, ಮಾನಸಿಕವಾಗಿ, ದೈಹಿಕವಾಗಿ ಘಾಸಿಗೊಳಿಸುವಂಥ ಆಚರಣೆಗಳಿಗೆ ಮಟ್ಟ ಹಾಕಲು ಸಮರ್ಪಕ ಕಾನೂನು ಅವಶ್ಯಕ ಎಂದಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ಕಾರವು ಸಮಾಜದಲ್ಲಿನ ಎಲ್ಲ ಮೂಢನಂಬಿಕೆಯ ಆಚರಣೆಗಳನ್ನು ತೊಲಗಿಸುವ ನಿಟ್ಟಿನಲ್ಲಿ ಕಾನೂನು ಜಾರಿಗೆ ತರುವ ಕಾರ್ಯ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಮೂಢನಂಬಿಕೆ ಪ್ರತಿಬಂಧಕ ಮಸೂದೆ ಜಾರಿಗೆ ತರುವ ಪ್ರಯತ್ನ ಮಾಡುವಂತೆ ಒತ್ತಾಯಿಸಿದ್ದಾರೆ.
ದಂಡೋರಾದಿಂದ ಇಂದು ಧರಣಿ
ರಾಯಚೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನ.18 ರಂದು ರಾಜ್ಯದ ಎಲ್ಲ 224 ವಿಧಾನಸಭೆ ಕ್ಷೇತ್ರಗಳ ಶಾಸಕರ ಮನೆ ಎದುರು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಧರಣಿ ಆಯೋಜಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಆರೋಗ್ಯಪ್ಪ ಪನ್ನೂರು, ವಿಭಾಗೀಯ ಅಧ್ಯಕ್ಷ ನಾಗರಾಜು, ಜಿಲ್ಲಾಧ್ಯಕ್ಷ ರಾಘವೇಂದ್ರ ಬೋರೆಡ್ಡಿ ಮತ್ತಿತರರು, ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರುವಂತೆ ಒತ್ತಾಯಿಸಲು ನ.18ರಂದು ಎಲ್ಲ ಶಾಸಕರ ಮನೆ ಮುಂದೆ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.