6 ತಿಂಗಳಿಂದ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ
ಸಿಂಧನೂರು: ಆರು ತಿಂಗಳಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.
ಅವರು ಭಾನುವಾರ ಚನ್ನಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಗ್ಗದ ಪ್ರಚಾರಕ್ಕಾಗಿ ಹೊಸ ಯೋಜನೆಗಳನ್ನು ಜಾರಿಗೊಳಿಸಲು ಹೊರಟಿದೆ. ಸಾರ್ವಜನಿಕರಿಂದ, ಶಾಲಾ ಮಕ್ಕಳಿಂದ ವಿರೋಧ ಬರುತ್ತಿದ್ದಂತೆ ಯೋಜನೆಗಳನ್ನು ಮಾರ್ಪಾಡು ಮಾಡಿ ಎಲ್ಲರಿಗೂ ವಿಸ್ತರಿಸುವುದಾಗಿ ಹೇಳುತ್ತಾರೆ.
ರಾಜಕೀಯ ದುರುದ್ದೇಶ: ಚನ್ನಳ್ಳಿ ಗ್ರಾಮದಲ್ಲಿ ಬಸವ ವಸತಿ ಯೋಜನೆಗಳ ಮನೆಗಳು ನೆನಗುದಿಗೆ ಬಿದ್ದಿರುವುದು, ಉದ್ಯೋಗ ಖಾತ್ರಿ ಯೋಜನೆಗೆ ಕೇವಲ ರು. 25 ಲಕ್ಷ ಹಣ ಬಂದಿರುವುದು, ಪ್ರೌಢಶಾಲೆ ಕಟ್ಟಡದ ಕಬ್ಬಿಣ ಕಳವಾಗಿರುವ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಟೀಕಿಸಿದರು.
ಜೆಡಿಎಸ್ ಅಭ್ಯರ್ಥಿಯಾಗಿದ್ದ ವೆಂಕಟರಾವ್ ನಾಡಗೌಡರಿಗೆ ಚನ್ನಳ್ಳಿ ಗ್ರಾಮದಲ್ಲಿ ಹೆಚ್ಚು ಮತಗಳು ಬಿದ್ದಿವೆ ಎಂಬ ಕಾರಣಕ್ಕಾಗಿ ಶಾಸಕ ಹಂಪನಗೌಡ ಬಾದರ್ಲಿ ಈ ಗ್ರಾಮಕ್ಕೆ ಅನುದಾನಗಳನ್ನು ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಇಂತಹ ದ್ವೇಷದ ರಾಜಕಾರಣ ಕಾಂಗ್ರೆಸ್ನ ಹುಟ್ಟುಗುಣವಾಗಿದೆ. ಇದಕ್ಕೆ ಬಾದರ್ಲಿಯವರೂ ಹೊರತಲ್ಲ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪುರ, ಶಾಸಕರಾದ ಎಸ್, ಶಿವರಾಜ ಪಾಟೀಲ್, ಮಾನಪ್ಪ ವಜ್ಜಲ್, ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾ ಯುವ ಅಧ್ಯಕ್ಷ ಪವನಕುಮಾರ, ಮಲ್ಲನಗೌಡ ಮಾವಿನಮಡು, ವೆಂಕಟೇಶ ನಂಜಲದಿನ್ನಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ಶಾಂತಿ ನಗರದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

