ದೇಶ ಅಭಿವೃದ್ಧಿಗೆ ಹಕ್ಕು, ಕರ್ತವ್ಯದ ಅರಿವು ಅಗತ್ಯ: ನ್ಯಾ.ಶಶಿಧರ
ಲಿಂಗಸ್ಗೂರು: ದೇಶದ ಅಭಿವೃದ್ಧಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳುವಳಿಕೆ ಹೊಂದುವುದು ಅಗತ್ಯವಾಗಿದೆ ಎಂದು ಹಿರಿಯ ಶ್ರೇಣಿ ಮತ್ತು ಜೆಎಂಎಫ್ಸಿ ಸಿವಿಲ್ ನ್ಯಾಯಾಧೀಶ ಆರ್.ವೈ. ಶಶಿಧರ ಕರೆ ಸಲಹೆ ನೀಡಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರು ತಿಳುವಳಿಕೆ ಹೊಂದದಿದ್ದರೆ ಮಧ್ಯವರ್ತಿಗಳ ಮೂಲಕ ಮೋಸ ಹೋಗುವುದು ಸಾಮಾನ್ಯ. ಪ್ರತಿಯೊಬ್ಬ ಪ್ರಜೆ ಯೋಜನೆಗಳ ಕುರಿತು ಸಮಗ್ರ ಮಾಹಿತಿ ಹೊಂದಬೇಕು. ತಮ್ಮ ಹಕ್ಕು, ಕರ್ತವ್ಯಗಳ ಬಗ್ಗೆ ತಿಳುವಳಿಕೆ ಹೊಂದಬೇಕು. ಕಳೆದ ಸೆ.1ರಿಂದ ಬಾಕಿ ಉಳಿದ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ ಮೂಲಕ ರಾಜಿ ಸಂಧಾನ ನಡೆಸಿ ಮೂರು ಸಾವಿರ ಪ್ರಕರಣ ಇತ್ಯರ್ಥ ಮಾಡಲಾಗಿದೆ. ಕಾನೂನು ಅರಿವು ಎಲ್ಲರಿಗೂ ತಿಳುವಳಿಕೆ ಹೊಂದುವುದು ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಜೆಎಂಎಫ್ಸಿ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ದ್ಯಾವಪ್ಪ ಎಸ್.ಬಿ., ಸಹಾಯಕ ಆಯುಕ್ತ ಟಿ. ಯೋಗೇಶ್, ತಾಲೂಕ ಸಮಾಜ ಕಲ್ಯಾಣಾಧಿಕಾರಿ ಎಲ್.ಬಿ. ಸಜ್ಜನ್, ಸಿಡಿಪಿಒ ಪ್ರಭಾಕರ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದರ, ಪಿಎಸ್ಐ ಖಾಜಾ ಹುಸೇನ್, ವಕೀಲರ ಸಂಘದ ಅಧ್ಯಕ್ಷ ಎಚ್. ಮುದಕಪ್ಪ ವಕೀಲರು, ಕಾರ್ಯದರ್ಶಿ ಜಂಬಣ್ಣ ವಕೀಲರು, ಶಮಶುದ್ದಿನ್ ವಕೀಲರು ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

