24ರಂದು ಅಡ್ಡಪಲ್ಲಕ್ಕಿ ಮಹೋತ್ಸವ
ದೇವದುರ್ಗ: ಪಟ್ಟಣದಲ್ಲಿ ನ.24ರಂದು ಉಜ್ಜಯಿನಿ ಪೀಠಾಧಿಪತಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ಆಯೋಜಿಸಲಾಗಿದೆ ಎಂದು ವೀರಶೈವ ಸಮಾಜ ಅಧ್ಯಕ್ಷ ಎ.ಮಲ್ಲಿಕಾರ್ಜುನ ಪಾಟೀಲ್ ತಿಳಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.24ರಂದು ಬೆಳಗ್ಗೆ 9ಕ್ಕೆ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಲಿದ್ದು, ಕಪಿಲ ಸಿದ್ದರಾಮೇಶ್ವರ ಜಾತ್ರೆ ಅಂಗವಾಗಿ, ಮೂಲಪರಂಪರೆ ಹಾಗೂ ನೂರಾರು ವರ್ಷಗಳಿಂದ ಆಚರಣೆ ಮಾಡುತ್ತಾ ಬಂದಿರುವ ಅಡ್ಡಪಲ್ಲಕ್ಕಿ ಉತ್ಸವನ್ನು ಆಯೋಜಿಸಲಾಗಿದೆ ಎಂದರು.
ಅಡ್ಡ ಪಲ್ಲಕ್ಕಿ ಉತ್ಸವದ ನಂತರ ಧಾರ್ಮಿಕ ಕಾರ್ಯಕ್ರಮಗಳಿದ್ದು, ಅದೇ ದಿನ ಸಂಜೆ ರಥೋತ್ಸವ ನಡೆಯಲಿದೆ.ಪಟ್ಟಣದ ಕಪಿಲ ಸಿದ್ದರಾಮೇಶ್ವರ ಮಠ, ಸರ್ವಧರ್ಮದವರ ಭಾವೈಕ್ಯತೆಯ ಕೇಂದ್ರವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಭಾನುಪ್ರಕಾಶ ಖೇಣದ್, ರಾಜಾ ಚಂದ್ರಹಾಸ ನಾಯಕ, ಬಾಪೂಗೌಡ ಚಿಕ್ಕಹೊನ್ನಕುಣಿ, ಪಿಕಾರ್ಡ್ ಬ್ಯಾಂಕಿನ ಮಾಜಿ ಅಧ್ಯಕ್ಷ ಅಮರಣಗೌಡ ಗೌರಂಪೇಟ, ಕುಪ್ಪಿ ಶಿವನಗೌಡ ಪಾಟೀಲ್, ಬಸವಂತ್ರಾಯ ಗೌಡ ಪೋಲೀಸ್ ಪಾಟೀಲ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

