ರಾಯಚೂರು

ಕ್ರೀಡೆಯಿಂದ ಆರೋಗ್ಯ ಸುಧಾರಣೆ

Published On :

ರಾಯಚೂರು: ಜಿಲ್ಲಾ ಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟ ಆಯೋಜನೆಯಲ್ಲಿ ಕ್ರೀಡಾ ಇಲಾಖೆಯ ನಿರಾಸಕ್ತಿಯಿಂದ ತೀವ್ರ ಬೇಸರಗೊಂಡ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಸೋಮವಾರ ನಡೆಯಿತು.
ನಗರದ ಕ್ರೀಡಾಂಗಣದಲ್ಲಿ ಸೋಮವಾರ ಬೆಳಗ್ಗೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಅತಿಥಿಗಳೂ ಸೇರಿದಂತೆ ಕ್ರೀಡಾಸಕ್ತರೂ ಆಗಮಿಸದಿರುವುದನ್ನು ಕಂಡು ತೀವ್ರ ಅಸಮಾಧಾನಗೊಂಡ ಶಾಸಕರು, ಕ್ರೀಡಾಧಿಕಾರಿಗಳು ಕಾಟಾಚಾರಕ್ಕೆ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಕ್ರೀಡಾಸಕ್ತಿ ಕಡಿಮೆಯಾಗುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಆಹ್ವಾನ ಪತ್ರಿಕೆಯ ಸಿದ್ಧಗೊಳಿಸಿರುವುದೂ ಸೇರಿ ಎಲ್ಲ ಹಂತದಲ್ಲಿ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ಎದ್ದು ಕಾಣುತ್ತದೆ. ಬೆಳಗ್ಗೆ 10ಕ್ಕೆ ಆರಂಭಗೊಳ್ಳಬೇಕಾದ ಕಾರ್ಯಕ್ರಮ ಒಂದೂವರೆ ಗಂಟೆ ಕಾದು ಕುಳಿತುಕೊಳ್ಳುವಂಥ ಪರಿಸ್ಥಿತಿ ನಿರ್ಮಿಸಿದ್ದಕ್ಕೆ ಬೇಸರಿಸಿದರು.
ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಯಿಂದ ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆ ಕಾಣುತ್ತದೆ. ದೈಹಿಕ ಸದೃಢತೆ ದೊರೆಯುತ್ತದೆ. ಗ್ರಾಮೀಣ ಭಾಗದ ಮಕ್ಕಳು ಹೆಚ್ಚೆಚ್ಚು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರತಿಭೆ ಮೆರೆಯುವಂತೆ ಮನವಿ ಮಾಡಿದರು.
ಜಿಪಂ ಉಪಾಧ್ಯಕ್ಷ ಕೆ. ಶರಣಪ್ಪ, ಕ್ರೀಡಾಧಿಕಾರಿ ಆರ್.ಎಸ್. ಕಣಬರಗಿ ಸೇರಿ ಅನೇಕರಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ಕ್ರೀಡಾಳುಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.