ಅನುದಾನ ದುರ್ಬಳಕೆ; ಕ್ರಿಮಿನಲ್ ಕೇಸ್ಗೆ ಸೂಚನೆ
ಕ.ಪ್ರ. ವಾರ್ತೆ ರಾಯಚೂರು ನ.20
ಸ್ಥಳೀಯ ನಗರಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸೇರಿದ ಶೇ.22.75ರ ಅನುದಾನ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳು ಮಂಗಳವಾರ ಹೊರಡಿಸಿದ್ದ 7 ಜನರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲು ನಿರ್ಧರಿಸಿದ್ದಾರೆ.
ನಗರಸಭೆಯಲ್ಲಿ 2008- 09, 2009- 10 ಮತ್ತು 2010- 11ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಶೇ. 22.75ರ ಅನುದಾನವನ್ನು ದುರ್ಬಳಕೆ ಮಾಡಿದ ಆರೋಪದ ಬಗ್ಗೆ ತನಿಖೆ ನಡೆಸಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅಪರಾಧಿಕ ಮೊಕದ್ದಮೆ ದಾಖಲಿಸುವಂತೆ ನಿರ್ದೇಶಿಸಿತ್ತು.
ಜಿಲ್ಲಾಡಳಿತಕ್ಕೆ ಎಫ್ಐಆರ್ ಪ್ರತಿ: ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು ಮಂಗಳವಾರ ಸಂಜೆ ನಗರಸಭೆ ಆಯುಕ್ತರಿಗೆ ಒಟ್ಟು 7 ಜನರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಫ್ಐಆರ್ ಪ್ರತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆಯುಕ್ತ ತಿಪ್ಪೇಶ್, ವ್ಯವಸ್ಥಾಪಕರಾಗಿದ್ದ ಗುರುರಾಜ್, ಕಿರಿಯ ಎಂಜಿನಿಯರ್ ಸಂಗಮೇಶ್, ಲೆಕ್ಕಾಧಿಕಾರಿ ಗೋಪಾಲಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ವಿಶ್ವಪ್ರತಾಪ್ ಅಲೆಕ್ಸಾಂಡರ್, ಪ್ರಥಮ ದರ್ಜೆ ಸಹಾಯಕ ಜಾವೀದ್, ಸಂಬಂಧಿಸಿದ ವಿಭಾಗದ ಕಂದಾಯ ನಿರೀಕ್ಷಕನ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಮಂಗಳವಾರ ಸಂಜೆ ಆದೇಶಿಸಿದ್ದರು.
ವಿರೋಧ: ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಅವರು ನಗರಸಭೆ ಆಯುಕ್ತರಿಗೆ ಪ್ರಕರಣಕ್ಕೆ ಸಂಬಂಧಿಸಿ ನೀಡಿದ್ದ ಆದೇಶ ಪತ್ರದಲ್ಲಿ ಪ್ರಕರಣದಲ್ಲಿ ಶಾಮೀಲಾಗಿದ್ದಾರೆಂಬ ಆರೋಪಿ ಆಗಿನ ಎಇಇ ಮಲ್ಲಿಕಾರ್ಜುನ ಗೋಪಿಶೆಟ್ಟಿ ಅವರ ಹೆಸರು ಕೈಬಿಟ್ಟಿದ್ದಕ್ಕೆ ಪ್ರಕರಣದ ಕುರಿತು ದೂರು ನೀಡಿದ್ದ ದಲಿತ ಸಂಘರ್ಷ ಸಮಿತಿ ಹಾಗೂ ರಾಯಚೂರು ವಿಕಾಸ ಪರಿಷತ್ ಸಂಘಟನೆಗಳ ಪ್ರಮುಖರು ಆಕ್ಷೇಪಿಸಿದ್ದರು.
ಈ ಹಿನ್ನೆಲೆಯಲ್ಲಿ ಮೊದಲು ಹೊರಡಿಸಿದ ಆದೇಶ ಹಿಂಪಡೆಯಲು ನಿರ್ಧರಿಸಿದ ಜಿಲ್ಲಾಧಿಕಾರಿಗಳು ಶೀಘ್ರದಲ್ಲಿಯೇ ಮತ್ತೊಂದು ಆದೇಶ ಹೊರಡಿಸಿ ಎಇಇ ಮಲ್ಲಿಕಾರ್ಜುನ ಗೋಪಿಶೆಟ್ಟಿ ಅವರ ಹೆಸರನ್ನೂ ಸೇರ್ಪಡೆಗೊಳಿಸಿ ಎಲ್ಲ 8 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಫ್ಐಆರ್ ಪ್ರತಿ ಶೀಘ್ರ ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

