ರಾಯಚೂರು

ಅಂತರ್ಜಾಲ ಸಮರ್ಪಕ ಬಳಕೆಯಿಂದ ಜ್ಞಾನವೃದ್ಧಿ

Published On :

ರಾಯಚೂರು: ಮಾಹಿತಿ ತಂತ್ರಜ್ಞಾನ ಯುಗವಿದು. ಇಂದಿನ ದಿನಮಾನದಲ್ಲಿ ಅಂತರ್ಜಾಲದಲ್ಲಿ ಎಲ್ಲ ಮಾಹಿತಿಯೂ ಲಭ್ಯವಾಗುತ್ತದೆ. ಜ್ಞಾನ ವೃದ್ಧಿಗೆ ಪೂರಕವಾಗಿ ಅಂತರ್ಜಾಲವನ್ನು ಬಳಕೆ ಮಾಡಿ ಸಾಧನೆ ಮೆರೆಯುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು.
ನಗರದ ಇನ್ಪೆಂಟ್ ಜೀಸಸ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಪಾಲಕರು ಶಿಕ್ಷಣ ಕೊಡಿಸುವತ್ತ ಹೆಚ್ಚು ಆಸಕ್ತಿ ತೋರಬೇಕು. ಆ ಮೂಲಕ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದರು.
ಅಂತರ್ಜಾಲದಲ್ಲಿ ಎಲ್ಲ ರೀತಿಯ ಮಾಹಿತಿಯೂ ಲಭ್ಯವಿದ್ದು, ಮಾಹಿತಿಯ ಅರಿವು ಜ್ಞಾನದ ಬೆಳವಣಿಗೆಗೆ ದಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಂತರ್ಜಾಲ ಸೌಲಭ್ಯದ ಪ್ರಯೋಜನ ಪಡೆದು ಶೈಕ್ಷಣಿಕ ಬದುಕಿನಲ್ಲಿ ಮಹತ್ತರ ಸಾಧನೆ ಮೆರೆಯುವಂತೆ ಮನವಿ ಮಾಡಿದರು.
ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ್ ಮದ್ಲಾಪುರ ಮಾತನಾಡಿ, ಸರ್ಕಾರವು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸಮರ್ಪಕ ಬಳಕೆ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ಕರೆ ನೀಡಿದರು.
ಸಮಾರಂಭದಲ್ಲಿ ಜಿಪಂ ಉಪಾಧ್ಯಕ್ಷ ಕೆ. ಶರಣಪ್ಪ, ಇನ್ಪೆಂಟ್ ಜೀಸಸ್ ಶಾಲೆಯ ಫಾದರ್ ಜಯರಾಜ್, ಡಿಡಿಪಿಐ ರಾಮಾಂಜನೇಯ, ಬಿಇಒ ಮಲ್ಲಿಕಾರ್ಜುನ, ನಗರಸಭೆ ಮಾಜಿ ಅಧ್ಯಕ್ಷ ಮಾರೆಪ್ಪ ಸೇರಿ ಅನೇಕರಿದ್ದರು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿರುವ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.