ರಾಯಚೂರು

ಭ್ರೂಣ ಲಿಂಗಪತ್ತೆ ನಿಷೇಧ ಕಾಯ್ದೆ; ನಾಳೆ ಕಾರ್ಯಾಗಾರ

Published On :

ರಾಯಚೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನ. 23ರಂದು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಹೆರಿಗೆಯ ಮುನ್ನ ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 11ಕ್ಕೆ ನಗರದ ಜಿಪಂ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಉದ್ಘಾಟಿಸುವರು. ಜಿಪಂ ಸಿಇಒ ಡಾ. ಮುದ್ದು ಮೋಹನ್ ಅಧ್ಯಕ್ಷತೆ ವಹಿಸುವರು. ರಾಜ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವಿಜಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾರಾಯಣಪ್ಪ ಹಾಗೂ ಜಿಲ್ಲಾ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಸಿ.ಎನ್. ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿರಿಯ ನ್ಯಾಯವಾದಿ ವಿ.ಸತೀಶ, ಅಮೃತಾ ಮಕ್ಕಳ ಆಸ್ಪತ್ರೆಯ ತಜ್ಞ ಡಾ. ಶಿವಪ್ಪ ಪಾಟೀಲ್ ಹಾಗೂ ಸೈಯಿದಾ ಸಫೀಯಾ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಅಲಿಯಾ ಖಾನಂ ಅತಿಥಿ ಉಪನ್ಯಾಸ ನೀಡುವರು ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಶಿಕ್ಷಕರ ಸಹ ಪಠ್ಯ ಚಟುವಟಿಕೆ ಇಂದು
ರಾಯಚೂರು: ಶಿಕ್ಷಕರ ಕಲ್ಯಾಣ ನಿಧಿಯಿಂದ ನ.22 ರಂದು ಜಿಲ್ಲಾಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಂದು ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸಹ ಪಠ್ಯ ಚಟುವಟಿಕೆಗಳು ನಡೆಯಲಿದ್ದು, ತಾಲೂಕು ಹಂತದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಮಾಹಿತಿಗೆ ಡಿಡಿಪಿಐ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
25ರಂದು ಜಿಪಂ ಸಭೆ
ರಾಯಚೂರು: ಇಲ್ಲಿನ ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆ ನ.25ರಂದು ಕರೆಯಲಾಗಿದೆ. ನಗರದ ಜಿಪಂ ಸಭಾಂಗಣದಲ್ಲಿ ಅಂದು ಬೆಳಗ್ಗೆ 11.30ಕ್ಕೆ ಸಾಮಾನ್ಯ ಸಭೆ ನಡೆಯಲಿದೆ.
ಶಿವರಾಜ ನೇಮಕ
ದೇವದುರ್ಗ: ರಾಜ್ಯ ಬುಡಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಶಿವರಾಜ ರುದ್ರಾಕ್ಷಿ ದೇವದುರ್ಗ ನೇಮಕಗೊಂಡಿದ್ದಾರೆ. ಈ ಕುರಿತು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಾಮ್ ಪ್ರಕಟಣೆ ನೀಡಿ, ಬುಡಗ ಜಂಗಮ ಸಮುದಾಯವು ಪ್ರಸ್ತುತ ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸಮಾಜವನ್ನು ಸಂಘಟಿಸುವ ಮೂಲಕ ಹೋರಾಡುವಂತೆ ಅವರು ಶಿವರಾಜ್ ರುದ್ರಾಕ್ಷಿ ಅವರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.