ಬಾವಿಗೆ ತಳ್ಳಿ ಬದುಕಿದ ತಾಯಿ, ಮಕ್ಕಳಿಬ್ಬರ ಸಾವು
ರಾಯಚೂರು: ಮಾನವಿ ತಾಲೂಕಿನ ಮುರ್ಕಿಗುಡ್ಡದ ವ್ಯಾಪ್ತಿಯ ರಾಮಸಿಂಗ್ ನಾಯಕ ತಾಂಡಾದಲ್ಲಿ ಗೃಹಿಣಿಯೊಬ್ಬಳು ತನ್ನ ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಯತ್ನಿಸಿಬದುಕುಳಿದಿದ್ದಾರೆ. ಆದರೆ, ಮಕ್ಕಳಿಬ್ಬರು ಅಸುನೀಗಿರುವ ಘಟನೆ ನಡೆದಿದೆ.
ಪೂಜಾ (2), ಅಂಜಲಿ (4 ತಿಂಗಳು) ಮೃತಪಟ್ಟ ಕಂದಮ್ಮಗಳು. ತಾಯಿ ಅನಸೂಯಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತನ್ನ ಮಕ್ಕಳೊಂದಿಗೆ ಮನೆಯಿಂದ ಹೊರಟು ಹೊರವಲಯದಲ್ಲಿ ಕಾಲುವೆ ನಿರ್ಮಾಣಕ್ಕೆಂದು ತೆಗೆದಿದ್ದ ಹೊಂಡದಲ್ಲಿ ಮಕ್ಕಳನ್ನು ಎಸೆದು ನಂತರ ತಾನೂ ಜಿಗಿದಿದ್ದಳು. ಅದೃಷ್ಟವಶಾತ್ ಹೊಂಡದಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಕ್ಕಳು ಕೊನೆಯುಸಿರೆಳೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣವಿದೆ.
2 ವಾಹನ ಜಪ್ತಿ
ರಾಯಚೂರು: ಜಿಲ್ಲೆಯ ವಿವಿಧೆಡೆ ದುಡಿಸಿಕೊಳ್ಳಲು ಬಾಲಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಎರಡು ವಾಹನಗಳನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಎರಡು ವಾಹನಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದ ತಂಡವು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ತಿಳಿಸಿದೆ.
ಹಣ ದುರ್ಬಳಕೆ; ಸಿಬ್ಬಂದಿ ಬಂಧನ
ರಾಯಚೂರು: ತಾಲೂಕಿನ ಕಲ್ಮಲಾ ನಾಡಕಚೇರಿಯಲ್ಲಿನ ಸರ್ಕಾರದ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿದ ಆರೋಪದ ಮೇಲೆ ಸಿಬ್ಬಂದಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎರಡನೇ ದರ್ಜೆ ಗುಮಾಸ್ತ ಅರಸಪ್ಪ ಎಂದು ಗುರುತಿಸಲಾಗಿದೆ. ಕಲ್ಮಲಾ ಗ್ರಾಮದ ನಾಡಕಚೇರಿಯಲ್ಲಿ ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಹಣಿ ಪತ್ರಿಕೆ ಮತ್ತಿತರೆ ಸೇವೆಗಳಿಗೆ ಜನರಿಂದ ಪಡೆದ .87 ಲಕ್ಷ ಹಣವನ್ನು ಖಜಾನೆಗೆ ಜಮಾ ಮಾಡದೇ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

