ಅನುದಾನ ದುರ್ಬಳಕೆ: ಕ್ರಿಮಿನಲ್ ಕೇಸ್ಗೆ ಆದೇಶ
ರಾಯಚೂರು: ಸ್ಥಳೀಯ ನಗರಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿರಿಸಿದ ಶೇ. 22.75ರ ಅನುದಾನದ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೊಸ ಆದೇಶ ಹೊರಡಿಸಿ, ಈ ಹಿಂದಿನ ಆಯುಕ್ತ ತಿಪ್ಪೇಶ್ ಮತ್ತು ಎಇಇ ಮಲ್ಲಿಕಾರ್ಜುನ ಗೋಪಶೆಟ್ಟಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಸಿದ್ದಾರೆ.
ಜಿಲ್ಲಾಧಿಕಾರಿಗಳು ಈ ಕುರಿತು ನಗರಸಭೆಯ ಪೌರಾಯುಕ್ತರಿಗೆ ಪತ್ರ ಬರೆದಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದಲ್ಲಿ ಅಕ್ರಮ ಎಸಗಿರುವ ಈ ಹಿಂದಿನ ಪೌರಾಯುಕ್ತ ತಿಪ್ಪೇಶ್ ಮತ್ತು ಎಇಇ ಮಲ್ಲಿಕಾರ್ಜುನ ಗೋಪಶೆಟ್ಟಿ ಅವರ ವಿರುದ್ಧ ಅಪರಾಧ ಮೊಕದ್ದಮೆ ಹೂಡಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಹಾಗೆಯೇ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನಂತರ ಎಫ್ಐಆರ್ ಪ್ರತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲೂ ಜಿಲ್ಲಾಧಿಕಾರಿಗಳು ನಗರಸಭೆಯ ಆಯುಕ್ತರಿಗೆ ಸೂಚಿಸಿದ್ದಾರೆ.
--
ವಾಜಪೇಯಿ, ಧ್ಯಾನಚಂದ್ಗೆ ಭಾರತ ರತ್ನ ನೀಡಲು ಒತ್ತಾಯ
ಸಿಂಧನೂರು: ಭಾರತ ಸರ್ಕಾರವು ನೀಡುವ ಅತ್ಯುನ್ನತ ಪ್ರಶಸ್ತಿ ಭಾರತ ರತ್ನವನ್ನು ಮಾಜಿ ಪ್ರಧಾನಿ ಒಳ್ಳೆಯ ವಾಕ್ ಚಾತುರ್ಯ ಉಳ್ಳವರಾಗಿದ್ದ ಅಟಲ್ ಬಿಹಾರ ವಾಜಪೇಯಿ ಹಾಗೂ ಹಾಕಿ ಮಾಂತ್ರಿಕ ಧ್ಯಾನಚಂದ್ಗೆ ನೀಡಿ ಗೌರವಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಆಧ್ಯಕ್ಷ ಮಹಾದೇವ ನಾಯಕ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಅದೇ ರೀತಿ ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಇಬ್ಬರು ಮಹನೀಯರಿಗೆ ಪ್ರಶಸ್ತಿ ನೀಡಬೇಕು. ಇದರಿಂದ ಪ್ರಶಸ್ತಿಯ ಮೌಲ್ಯವೂ ಹೆಚ್ಚುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪಿ. ರವಿಕುಮಾರ ಕೊಪ್ಪಳ್, ಪ್ರಕಾಶ್ ಜಾರಾವಲಾ, ತಾ. ಪ್ರಧಾನ ಕಾರ್ಯದರ್ಶಿ ನಾಗೇಶರಾವ್ ಕಾಮಾಡಿ, ನಗರ ಪ್ರ. ಕಾರ್ಯದರ್ಶಿ ಚನ್ನನಗೌಡ ಬನ್ನಿಗನೂರ, ಬಸವರಾಜ ಹರಸೂರ್, ಪ್ರಶಾಂತ ಸಜ್ಜನ್ ಮತ್ತಿತರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

