ಇಂದು ನಿರ್ದೇಶಕರ ಸಮಾವೇಶ
ರಾಯಚೂರು: ನಗರದಲ್ಲಿ ನ.23 ರಂದು ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ನಿಮಿತ್ತ ತಾಲೂಕಿನ ಸರ್ಕಾರಿ ಶಾಲೆಗಳ ಮಕ್ಕಳ ಹಕ್ಕುಗಳ ಕ್ಲಬ್ನ ನಿರ್ದೇಶಕರ ಸಮಾವೇಶವನ್ನು ಆಯೋಜಿಸಲಾಗಿದೆ. ನಗರದ ರಂಗಮಂದಿರದಲ್ಲಿ ನ.23ರಂದು ಬೆಳಗ್ಗೆ 11.30ಕ್ಕೆ ನಡೆಯುವ ಸಮಾವೇಶವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಡಿಪಿಐ ರಾಮಾಂಜನೇಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ದೊರೆಸ್ವಾಮಿ, ಜಿಲ್ಲಾ ಕಾರ್ಮಿಕಾಧಿಕಾರಿ ಆರತಿ, ಬಿಇಒ ಮಲ್ಲಿಕಾರ್ಜುನ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆಂದು ಯುನಿಸೆಫ್ನ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಕಟಣೆ ತಿಳಿಸಿದೆ.
ಇಮಾಮ್ ನಿಧನ: ಉಪನ್ಯಾಸಕರ ಸಂತಾಪ
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಇಮಾಮ್ ಹುಸೇನ್ ಅವರ ನಿಧನಕ್ಕೆ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಶೋಕ ವ್ಯಕ್ತಪಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ರಾಜಾಸಾಬ್, ಪ್ರಧಾನ ಕಾರ್ಯದರ್ಶಿ ನರಸಪ್ಪ ಭಂಡಾರಿ, ಖಜಾಂಚಿ ಗೋವರ್ಧನರೆಡ್ಡಿ ಮತ್ತಿತರರು, ಇಮಾಮ್ ಹುಸೇನ್ ಅವರ ಅಗಲಿಕೆಯಿಂದ ಸಂಘಕ್ಕೆ ತುಂಬದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
29ರಂದು ಬೆಳಗಾವಿ ಚಲೋ ಹೋರಾಟ
ರಾಯಚೂರು: ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 29ರಂದು ಬೆಳಗಾವಿ ಚಲೋ ಹೋರಾಟ ಆಯೋಜಿಸಿದೆ. ಉದ್ಯೋಗ ಖಾತ್ರಿ ಸಮರ್ಪಕ ಅನುಷ್ಠಾನ, ಕನಿಷ್ಠ ಕೂಲಿ ಮೊತ್ತ ಹೆಚ್ಚಳ, ಸಮಾಜ ಕಲ್ಯಾಣ ಇಲಾಖೆಯ ಪಿಂಚಣಿ ಮೊತ್ತ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಚಲೋ ಆಯೋಜಿಸಲಾಗಿದೆ ಎಂದು ಸಂಘದ ಗುರುರಾಜ್, ರಾಘವೇಂದ್ರ, ಶರಣಗೌಡ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

