ಜಿಲ್ಲೆ ಅಭಿವೃದ್ಧಿಗೆ ಸಚಿವ ಸಂಪುಟ ಸ್ಥಾನ ಬೇಕು
ಲಿಂಗಸ್ಗೂರು: ಜಿಲ್ಲೆಯಲ್ಲಿ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳು ದುಸ್ಥಿತಿಗೀಡಾಗಿದ್ದು, ಸಮಗ್ರ ಅಭಿವೃದ್ಧಿಗೆ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಸ್ಥಾನಮಾನ ನೀಡಿದರೆ ಅಭಿವೃದ್ಧಿ ವೇಗ ಹೆಚ್ಚಲಿದೆ ಎಂದು ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ್ ಅನ್ವರಿ ಅಭಿಪ್ರಾಯ ಪಟ್ಟರು.
ಪಟ್ಟಣದ ಖಾಸಗಿ ವಸತಿ ಗೃಹದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಂದು ಹೋದರೂ ಅಲ್ಲಿನ ರಸ್ತೆಗಳು ಸುಧಾರಣೆ ಕಂಡಿಲ್ಲ. ಇದರಿಂದ ಸಂಚಾರ ಅಯೋವುಯವಾಗಿದ್ದು, ಸರ್ಕಾರದ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಬ್ದಾರಿ ತನಕ್ಕೆ ಜನತೆ ಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಗಳ ಅಭಿವೃದ್ಧಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.
ಸಿಎಂಗೆ ಅಂಕುಶ: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂತ್ರಿ ಮಂಡಲದಲ್ಲಿ ಅನೇಕ ಸಚಿವರು ಅಸಹಾಯಕಾರಿದ್ದಾರೆ. ಸಚಿವರ ಕಾರ್ಯಕ್ಕೆ ಮುಖ್ಯಮಂತ್ರಿಗಳು ಅಂಕುಶ ಹಾಕಿದ್ದಾರೆಂಬ ಭಾವನೆ ವ್ಯಕ್ತವಾಗುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದರು. ಸರ್ಕಾರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕಾಲಾವಕಾಶವಿದ್ದು, ಹೊಣೆಗಾರಿಕೆ ಅರಿತು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಶಾಸಕಾಂಗ ಜಾರಿಗೊಳಿಸಿದ ಯೋಜನೆಗಳ ಅನುಷ್ಠಾನಕ್ಕೆ ಕಾರ್ಯಾಂಗದ ಅಧಿಕಾರಿ ವರ್ಗ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಆದರೆ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿನ ಎಡವಟ್ಟುಗಳಿಂದ ಸರ್ಕಾರದ ಜನಪ್ರೀಯ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಗೆ ಮಾರಾಟವಾಗುತ್ತಿದ್ದು, ನಿಗಾ ವಹಿಸಬೇಕಾದ ಅಧಿಕಾರಿ ವರ್ಗ ನಿದ್ರೆಗೆ ಜಾರಿದೆ ಎಂದು ಆರೋಪಿಸಿದರು.
ಅಭಿವೃದ್ಧಿಗೆ ಶ್ರಮಿಸಿ: ಸಿಎಂ ಸಿದ್ದರಾಮಯ್ಯನವರ ಅತಿಯಾದ ಅಹಿಂದ ಪ್ರೀತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪೆಟ್ಟು ನೀಡಲಿದ್ದು, ಸರ್ವ ಜಾತಿ ಜನಾಂಗದ ಅಭಿವೃದ್ಧಿಗೆ ಶ್ರಮಿಸಬೇಕಾಗಿರುವುದು ನಾಡಿನ ಮುಖ್ಯಮಂತ್ರಿಯ ಜವಾಬ್ದಾರಿಯಾಗಿದ್ದು, ತಮ್ಮ ನಡೆ ಸುಧಾರಿಸಿಕೊಂಡು ಅಭಿವೃದ್ಧಿಗೆ ಮುಂದಾಗಬೇಕು ಎಂದ ಬಸವರಾಜ ಪಾಟೀಲ್ ಅನ್ವರಿ, ತಾವು ಕೆಜೆಪಿ ತೊರೆಯುವುದಾಗಿ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಪಾಮಯ್ಯ ಮುರಾರಿ, ಮುಖಂಡರಾದ ಅಮರೇಗೌಡ ಕಾರಲಕುಂಟಿ, ಹನುಮೇಶ ಕುಲ್ಕರ್ಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

