ಕನ್ನಡ ಪದ ಬಳಕೆ ಹೆಚ್ಚಾಗಲಿ
ಸಿಂಧನೂರು: ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಹೆಚ್ಚು ಒಲವು ಆಸಕ್ತಿ ಬೆಳೆಸುವ ಉದ್ದೇಶವಾಗಿದೆ. ಮಾತನಾಡುವಾಗ, ವ್ಯವಹಾರ ಮಾಡುವಾಗ ಇಂಗ್ಲಿಷ್ ಶಬ್ದಗಳನ್ನು ಬಳಸಲಾಗುತ್ತಿದೆ. ಇದರ ಬದಲಾಗಿ ಕನ್ನಡ ಪದಗಳ ಬಳಕೆ ತರಬೇಕೆಂದು ತಾಲೂಕ ಕಸಾಪ ಅಧ್ಯಕ್ಷೆ ರಮಾದೇವಿ ಶಂಭೋಜಿ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕ್ರಮ ಸಿರಿಗಂಧ ಕನ್ನಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾಷೆಯ ಬೆಳವಣಿಗೆಗೆ ಅನುಕೂಲ: ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್. ದೇವೇಂದ್ರಗೌಡ ಮಾತನಾಡಿ, ವಿದ್ಯಾರ್ಥಿಗಳು ದಿನನಿತ್ಯ ಬಳಕೆಯಲ್ಲಿ ಆಂಗ್ಲ ಪದಗಳ ಬದಲಾಗಿ ಕನ್ನಡ ಪದಗಳನ್ನು ಹೆಚ್ಚು ಹೆಚ್ಚು ಬಳಸಬೇಕು. ಈ ಮೂಲಕ ಕನ್ನಡ ಭಾಷೆಯ ಬೆಳವಣಿಗೆಗೆ ಅನುಕೂಲ ಎಂದರು.
ಸಂತೋಷದ ಸಂಗತಿ: ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಚಂದ್ರಶೇಖರ ಬಹುಮಾನ ವಿತರಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲೆಯ ಹಿರಿಯ ಶಿಕ್ಷಕ ಹನುಮಂತರಾವ ಮಾತನಾಡಿ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗೆ ವಿನೂತನವಾದ ಸಿರಿಗಂಧ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತೋಷದ ಸಂಗತಿ ಎಂದರು.
ಚುಸಾಪ ಜಿಲ್ಲಾಧ್ಯಕ್ಷ ಬೀರಪ್ಪ ಶಂಭೋಜಿ, ನಾರಾಯಣಾಚಾರ್ ಜೋಶಿ ಉಪಸ್ಥಿತರಿದ್ದರು. ಸಿರಿಗಂಧ ಕನ್ನಡ ಕಾರ್ಯಕ್ರಮದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಚಾಮುಂಡಾ ದ್ವಿತೀಯ ಸ್ಥಾನ ಪಡೆದ ಇರ್ಫಾನ್, ತೃತೀಯ ಸ್ಥಾನ ಪಡೆದ ಶರಣಮ್ಮ ಇವರುಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ನೀಡಲಾಯಿತು.
ತಾಲೂಕ ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ ಪ್ರಾಸ್ತಾವಿಕ ಮಾತನಾಡಿದರು. ಚಿತ್ರಕಲಾ ಶಿಕ್ಷಕಿ ಶಾರದಾ ಸ್ವಾಗತಿಸಿದರು. ರಾಜ್ಯ ಸರ್ಕಾರಿ ನೌಕರ ಸಂಘದ ನಿರ್ದೇಶಕ ಶರಬಸವ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಮಾರುತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

