ಮಾ. 30ರವರೆಗೆ ನೀರು ಹರಿಸಲು ಒತ್ತಾಯ
ಲಿಂಗಸ್ಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪೂರ ಏತನೀರಾವರಿ ಕಾಲುವೆಗಳಿಗೆ ಮಾ. 30ರವರೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷ ಶಿವಪುತ್ರಗೌಡ ಪೊಲೀಸ್ ಪಾಟೀಲ್ ಒತ್ತಾಯಿಸಿದ್ದಾರೆ. 3 ವರ್ಷದಿಂದ ಬರಗಾಲ ನೆಪವೊಡ್ಡಿ ನೀರು ಸ್ಥಗಿತಗೊಳಿಸಿ ರೈತರನ್ನು ಸಂಕಷ್ಟಕ್ಕೆ ತಳ್ಳಲಾಗಿದೆ. ಪ್ರಸಕ್ತ ವರ್ಷ ಉತ್ತಮ ಮಳೆಯಾಗಿದ್ದು, ನ. 18ರಂದು ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ. 10ರವರೆಗೆ ನೀರು ಹರಿಸುವ ನಿರ್ಧಾರ ತೆಗೆದುಕೊಂಡಿರುವುದು ಕ್ರಮವಲ್ಲ. ವಾರಬಂದಿ ಮಾಡಿಯಾದರೂ ಮಾ. 30 ರವರೆಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಸಂಘದಿಂದ ಸಂಬಂಧಿಸಿದ ಇಲಾಖೆಗೆ ಮುತ್ತಿಗೆ ಹಾಕಲಾಗುವುದೆಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಟಿ.ಬಿ. ಎಡದಂಡೆ ನಾಲೆಗೆ ಮಾ. 31ರವರೆಗೆ ನೀರು
ಸಿಂಧನೂರು: ತುಂಗಭದ್ರಾ ಎಡದಂಡೆ ನಾಲೆಗೆ ಮಾರ್ಚ್ 31ರವರೆಗೆ ನೀರು ಹರಿಸಲು ನೀರಾವರಿ ಸಲಾಹ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. ಅವರು ದೂರವಾಣಿ ಮೂಲಕ ಮಾತನಾಡಿ ಜ.1, 2014ರಿಂದ ಮಾರ್ಚ್ 31ರವರೆಗೆ 3200 ಕ್ಯೂಸೆಕ್ನಂತೆ ಕಾಲುವೆ ನೀರು ಹರಿಯಲಿದೆ. ಡಿ.1, 2013ರಿಂದ 15ರವರೆಗೆ 1000 ಕ್ಯೂಸೆಕ್ನಂತೆ ಹಾಗೂ ಡಿ.16ರವರೆಗೆ 1500 ಕ್ಯೂಸೆಕ್ ರನ್ನು ಎಡದಂಡೆ ನಾಲೆಗೆ ಬಿಡಲು ನಿರ್ಣಯ ಅಂಗೀಕರಿಸಲಾಗಿದೆ. ಅಲ್ಲದೇ ಪಾಪಯ್ಯ ಕಾಲುವೆಯ ಸುರಂಗ ಮಾರ್ಗವನ್ನು ಅಗಲೀಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಐಸಾನ್: ಮಾಹಿತಿ ನೀಡಿಕೆ ಕಾರ್ಯಕ್ರಮ
ರಾಯಚೂರು: ನಗರದ ಗಾಜಗಾರಪೇಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ವಿದ್ಯಾರ್ಥಿಗಳಿಗೆ ಐಸಾನ್ ಧೂಮಕೇತುವಿನ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೌರಮಂಡಲದ ಪರಿಚಯ, ಧೂಮಕೇತುವಿನ ಕುರಿತು ವಿವಿಧ ಮಾಹಿತಿಗಳನ್ನು ಈ ವೇಳೆ ವಿದ್ಯಾರ್ಥಿಗಳಿಗೆ ನೀಡಲಾಯಿತು. ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ವೀರೇಂದ್ರ ಪಾಟೀಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಧೂಮಕೇತುವಿನ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯಗುರುಗಳು ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.
ಕನಕ ಜಯಂತಿ ಆಚರಣೆ
ರಾಯಚೂರು: ತಾಲೂಕಿನ ಉಡುಮಗಲ್ ಖಾನಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಕನಕದಾಸರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲೆಯ ಮುಖ್ಯಗುರು ಬಂದೋಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಹಿರಿಯ ಶಿಕ್ಷಕ ಆರ್.ಪಿ.ಕುಲಕರ್ಣಿ ಪಾಲ್ಗೊಂಡಿದ್ದರು. ಶಾಲೆಯ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

