ಕಾನೂನು ಮತ್ತು ಹಕ್ಕುಗಳ ಅರಿವಿನ ಕೊರತೆ: ಕಳವಳ
ರಾಯಚೂರು:ದೇಶದ ಪ್ರಜೆಗಳಿಗೆ ಸಂವಿಧಾನದಲ್ಲಿ ಅನೇಕ ಹಕ್ಕು ಮತ್ತು ಕಾನೂನು ರೂಪಿಸಲಾಗಿದೆ. ಆದರೆ ದೇಶದ ಅನೇಕರಲ್ಲಿ ತಮಗಾಗಿ ರೂಪಿಸಿದ ಕಾನೂನು ಮತ್ತು ಹಕ್ಕುಗಳ ಹಗ್ಗೆ ಅರಿವಿನ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸಾಕ್ಷರತಾ ರಥವು ಸಂಚರಿ ಸುವ ಮೂಲಕ ಜಾಗೃತಿ ಮೂಡಿಸುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿ. ಕೃಷ್ಣಭಟ್ ಹೇಳಿದರು.
ಅವರು ನಗರದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಆಯೋಜಿಸಿ ರುವ ಕಾನೂನು ಸಾಕ್ಷರತಾ ರಥದ ಯಾತ್ರೆಗೆ ಪೂಜೆ ನೆರವೇರಿಸಿ ಚಾಲನೆ ನೀಡಿ, ಕಾನೂನು ಪ್ರಜೆಗಳನ್ನು ಶೋಷಣೆಯಿಂದ ತಡೆಯಲು ರೂಪಿಸಿದ್ದು, ಅವುಗಳ ಬಗ್ಗೆ ಎಲ್ಲರಲ್ಲಿ ಅರಿವು ಮೂಡುವುದು ಅವಶ್ಯಕ ಎಂದರು.
ಕಳವಳ: ಅದರಲ್ಲೂ ಹಿಂದುಳಿದಂಥ ಜಿಲ್ಲೆಯಲ್ಲಿ ಶೋಷಿತ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಂಥವರಿಗೆ ಕಾನೂನಿನ ಅರಿವು ಮೂಡಿಸುವುದು ಕಾನೂನು ಸಾಕ್ಷರತಾ ರಥದ ಮೂಲ ಆಶಯವಾಗಿದೆ. ಗ್ರಾಮೀಣ ಪ್ರದೇಶದವರಲ್ಲಿ ಕಾನೂನುಗಳ ಬಗ್ಗೆ ತಿಳಿವಳಿಕೆಯ ಕೊರತೆಯಿದೆ ಎಂದು ಕಳವಳ ವ್ಯಕ್ತಪಡಿಸಿದರು.ರಾಜ್ಯ ನ್ಯಾಯಾಂಗ ಇಲಾಖೆಯ ಕಾನೂನು ಸಾಕ್ಷರತಾ ರಥದ ಪ್ರವಾಸವು ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಎಲ್ಲರಿಗೆ ಕಾನೂನಿನ ತಿಳಿವಳಿಕೆ ಮೂಡಿಸುವುದು ಗುರಿಯಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರಂತೆ ಕಾನೂನು ಸಾಕ್ಷರತಾ ವಾಹನವು ಈಗಾಗಲೇ ಲಿಂಗಸ್ಗೂರು ಮತ್ತು ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಸಂಚರಿಸಿ ನಗರಕ್ಕೆ ಆಗಮಿಸಿದೆ ಎಂದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಪ್ರಜ್ಞೆ ಮೂಡಿಸುವುದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸಾಕ್ಷರತಾ ರಥ ಸದ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು, 15 ದಿನಗಳ ಅವಧಿಯಲ್ಲಿ ಮಾನವಿ, ಸಿಂಧನೂರು ತಾಲೂಕುಗಳಲ್ಲಿ ಈ ರಥವು ಸಂಚರಿಸಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶ ಸತೀಶ್ ಸಿಂಗ್, ಕಾಡ್ಲೂರು ಸತ್ಯನಾರಾಯಣಾಚಾರ್ಯ, ಮಹಮ್ಮದ್ ಮುಜಾಹಿದ್ ಉಲ್ಲಾ, ವಕೀಲರ ಸಂಘದ ಅಧ್ಯಕ್ಷ ಭಾನುರಾಜ್, ವಕೀಲರಾದ ಪ್ರಭು ಪಾಟೀಲ್, ಸರ್ಕಾರಿ ಅಭಿಯೋಜಕ ರಾಘವೇಂದ್ರ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ ಮತ್ತು ಜನತೆ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

