ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ: ಅಮರಗುಂಡಪ್ಪ
ಸಿಂಧನೂರು: ರೋಗಿಗಳ ಜೀವನದ ಜೊತೆ ಚಲ್ಲಾಟವಾಡುತ್ತಿರುವ ನಕಲಿ ವೈದ್ಯರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ನಕಲಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ, ಅನಧಿಕೃತವಾಗಿ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆಯುಷ್ಯ ವೈದ್ಯಾಧಿಕಾರಿ ಜೀಡಿ ಡಾ. ಅಮರಗುಂಡಪ್ಪ ಹೇಳಿದರು.
ಬಳಗಾನೂರ ಗ್ರಾಮದಲ್ಲಿ ಬಾಲಾಜಿ ಕ್ಲಿನಿಕ್ ಮೇಲೆ ದಾಳಿ ನಡೆಸಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿ ಅವರು ಬಳಗಾನೂರು ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹಾಗೂ ಜಿಲ್ಲೆಯಾದ್ಯಂತ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಹಳ್ಳಿಗಳಲ್ಲಿನ ನಕಲಿ ವ್ಯದ್ಯ ವೃತ್ತಿ ನಡೆಸುವವರ ಮೇಲೆ ಕರ್ನಾಟಕ ವೈದ್ಯಕೀಯ ವೃತ್ತಿ ದುರುಪಯೋಗ ಕಾಯ್ದೆ 1961 ಸೆಕ್ಷನ್ 34 ರಿಂದ 38ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಅನಧಿಕೃತವಾಗಿ ಆಸ್ಪತ್ರೆ ತೆರೆದು ನಕಲಿ ವೈದ್ಯವೃತ್ತಿ ನೆಡೆಸುವವವರ ಮಾಹಿತಿ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ ಮಾಜಿ ಅಧ್ಯಕ್ಷ ಎಸ್.ಎಸ್. ಜಾಗೀರದಾರ ಹನುಮೇಶ ಕಮ್ಮಾರ, ಕೃಷ್ಣಾ ಪಿ.ಜಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

