ಅಪರಾಧ ಸುದ್ದಿಗಳು
ಮದ್ಯವ್ಯಸನಿ ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ಬರ್ಮಾಕ್ಯಾಂಪ್ನಲ್ಲಿ ಮದ್ಯವ್ಯಸನಿಗೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೂರ್ಯ ಪಲ್ಲನ್ ಮೃತಪಟ್ಟವರು. ಈತ ವಿಪರೀತ ಮದ್ಯ ವ್ಯಸನಿಯಾಗಿದ್ದರಿಂದ ಬೇಸತ್ತಿದ್ದ ಆತನ ಪತ್ನಿ ಬುದ್ಧಿಮಾತು ಹೇಳಿದ್ದರು. ಇದರಿಂದ ಮನೆಯಲ್ಲಿದ್ದ ಸೀಮೆಎಣ್ಣೆ ಮೈಮೇಲೆ ಸುರಿದು ಸೂರ್ಯ ಬೆಂಕಿ ಹಚ್ಚಿಕೊಂಡಿದ್ದ. ತೀವ್ರ ಸುಟ್ಟ ಗಾಯಗಳಿಂದ ಬಳಲಿದ ಆತನನ್ನು ಬಳ್ಳಾರಿ ವಿಮ್ಸ್ಗೆ ಸೇರಿಸಲಾಗಿತ್ತು. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಶರಣಯ್ಯಸ್ವಾಮಿ
ಲಿಂಗಸ್ಗೂರು: ತಾಲೂಕಿನ ಗುರುಗುಂಟಾ ಗ್ರಾಪಂ ಅಭಿವೃದದ್ಧಿ ಅಧಿಕಾರಿ ಶರಣಯ್ಯಸ್ವಾಮಿ ಹಿರೇಮಠ ಸೋಮವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ. ಅಂತ್ಯಕ್ರಿಯೆ ಸೋಮವಾರ ಸಂಜೆ ಸ್ಥಳೀಯ ವೀರಶೈವ ರುದ್ರಭೂಮಿಯಲ್ಲಿ ಜರುಗಿತು. ಶರಣಯ್ಯಸ್ವಾಮಿ ನಿಧನರಾದ ಪ್ರಯುಕ್ತ ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದರು.
ದ್ವಿಚಕ್ರ ವಾಹನ ಲಾರಿಗೆ ಡಿಕ್ಕಿ: ಒಬ್ಬನಿಗೆ ಗಾಯ
ಸಿಂಧನೂರು: ನಗರದ ಎಪಿಎಂಸಿ ಬಳಿ ಭಾನುವಾರ ರಾತ್ರಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರನಿಗೆ ತಲೆಗೆ ತೀವ್ರ ಗಾಯವಾದ ಘಟನೆ ನಡೆದಿದೆ. ಶಿವಶಂಕರ ಬಲ್ಲಟಗಿ ಗಾಯಗೊಂಡವರಾಗಿದ್ದು, ಬಸವ ಪ್ರಸಾದ ನಿಲಯದಿಂದ ಸಿಂಧನೂರು ಕಡೆ ಬರುತ್ತಿದ್ದಾಗ ಎದುರಿಗೆ ಬಂದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಬಾಳನಗೌಡ ಭೇಟಿ ನೀಡಿ ಗಾಯಗೊಂಡ ಶಿವಶಂಕರ ಅವರನ್ನು ಆಸ್ಪತ್ರೆಗೆ ಸೇರಿಸಿದರು.
ಮಹಿಳೆ ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್-2ರಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲಿ ಮಂಡಲ್ (32) ಮೃತಪಟ್ಟವರು. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಕೋಚಿಂಗ್ ತರಬೇತಿ ಪಡೆಯುತ್ತಿದ್ದ ಮಗಳನ್ನು ಭೇಟಿಯಾಗಲು ಬಯಸಿದ್ದಳು. ಅದಕ್ಕೆ ಮನೆಯವರು ನಿರಾಕರಿಸಿದ್ದರಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

