ರಾಯಚೂರು

ಡಿ.5ರಂದು ಸುವರ್ಣಸೌಧಕ್ಕೆ ಮುತ್ತಿಗೆ: ಬೆಂಬಲ

Published On :

ರಾಯಚೂರು: ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಡಿ.5ರಂದು ನಡೆಸಲುದ್ದೇಶಿಸಿರುವ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ದಂಡೋರಾ ಎಂಆರ್‌ಎಚ್‌ಎಸ್ ಸಂಘಟನೆ ಬೆಂಬಲಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ವ್ಯವಸ್ಥಾಪಕ ಅಧ್ಯಕ್ಷ ಶರಣಬಸವ, ಜಿಲ್ಲಾಧ್ಯಕ್ಷ ಸೋಮಶೇಖರ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಹನುಮೇಶ ಕೊಲಿಮಿ, ಕಳೆದ 66 ವರ್ಷಗಳಿಂದ ಮಾದಿಗರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಡುತ್ತಿದ್ದಾರೆ. ಹಕ್ಕುಗಳನ್ನು ಒತ್ತಾಯಪೂರ್ವಕವಾಗಿ ಪಡೆದುಕೊಳ್ಳುವಂಥ ಪರಿಸ್ಥಿತಿ ದೇಶದಲ್ಲಿದೆ ಎಂದು ದೂರಿದರು.
ಜಾರಿಗಾಗಿ ಒತ್ತಾಯ: ಈ ಹಿನ್ನೆಲೆಯಲ್ಲಿ ಮಾದಿಗ ಜನಾಂಗದವರು ಒಳಮೀಸಲಾತಿಗೆ ಒತ್ತಾಯಿಸಿ ನಡೆಸಿದ ಹೋರಾಟದ ಫಲವಾಗಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದಾಶಿವ ಆಯೋಗವು ಮಾದಿಗರಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ವರದಿ ಸಲ್ಲಿಸಿದೆ. ಆದರೆ ಆಗಿನ ಬಿಜೆಪಿ ಮತ್ತು ಈಗಿನ ಕಾಂಗ್ರೆಸ್ ಸರ್ಕಾರ ವರದಿ ಯಥಾವತ್ತು ಜಾರಿಗೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಅಧಿವೇಶನದ ಸಂದರ್ಭ ಡಿ. 5ರಂದು ವಿವಿಧ ಮಾದಿಗ ಜನಾಂಗದ ಸಂಘಟನೆಗಳು ಆಯೋಜಿಸಿರುವ ಸುವರ್ಣಸೌಧ ಮುತ್ತಿಗೆ ಹೋರಾಟಕ್ಕೆ ದಂಡೋರಾ ಎಂಆರ್‌ಎಚ್‌ಎಸ್ ಬೆಂಬಲಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಖಾಲಿಯಿರುವ ಬ್ಯಾಕಲಾಗ್ ಹುದ್ದೆ ಭರ್ತಿ ಮಾಡಬೇಕು. ಮಹಾನಗರಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವವರ ಸೇವೆಯನ್ನು ಕಾಯಂಗೊಳಿಸಬೇಕು. ಕನಕದಾಸ, ವಾಲ್ಮೀಕಿ ಜಯಂತಿ ಆಚರಿಸುವಂತೆ ಸರ್ಕಾರವೇ ಶಿವಶರಣ ಮಾದಾರ ಚನ್ನಯ್ಯ ಜಯಂತಿ ಆಚರಣೆಗೆ ಕೂಡಲೇ ಆದೇಶ ಹೊರಡಿಸುವಂತೆ ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.