ರಾಯಚೂರು

ದಾಳಿಗೆ ಹೆದರಿ ನಕಲಿ ವೈದ್ಯರು ಆಸ್ಪತ್ರೆ ಬಾಗಿಲು ಮುಚ್ಚಿದರೇ?

Published On :

ಲಿಂಗಸ್ಗೂರು:  ಜಿಲ್ಲಾ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ನಕಲಿ ವೈದ್ಯರ ಪತ್ತೆಗಾಗಿ ತಾಲೂಕಿನ ಗುರುಗುಂಟಾ ಗ್ರಾಮಕ್ಕೆ ಮಂಗಳವಾರ ಆಗಮಿಸಿದಾಗ ಬಹುತೇಕ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದವು. ಇದರಿಂದ ಜಿಲ್ಲಾ ತಂಡದ ಅಧಿಕಾರಿಗಳು ನಕಲಿ ವೈದ್ಯರಿರಬಹುದು ಎಂದು ಶಂಕಿಸಿದ್ದಾರೆ.
ಇಲಾಖೆ ಅಧಿಕಾರಿಗಳಾದ ಡಾ. ವೆಂಕಟೇಶ, ಡಾ. ಪವಾಡೆಪ್ಪ ನೇತೃತ್ವದ ತಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ನಾಗಲೀಕರ, ಹಟ್ಟಿ ಠಾಣೆ ಪೊಲೀಸರ ಸಹಾಯದಿಂದ ಸುಮಾರು 8 ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಬಹುತೇಕ ಆಸ್ಪತ್ರೆಗಳು ಮುಚ್ಚಿದ್ದವು. ನಂತರ ಡಾ. ಆದೇಶ ನೀರಲಕೇರಿ ಅವರ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಹಾಗೂ ಆಸ್ಪತ್ರೆಗೆ ಸಂಬಂಧಿಸಿದ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ನಂತರ ಜಿಲ್ಲಾ ತಂಡದ ಅಧಿಕಾರಿ ಡಾ. ಪವಾಡೆಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಗುರುಗುಂಟಾ ಗ್ರಾಮದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ನಕಲಿ ಅಥವಾ ಅಸಲಿ ವೈದ್ಯರ ಕುರಿತು ಸೂಕ್ತ ಪರಿಶೀಲನೆ ನಡೆಸಲು ಆಸ್ಪತ್ರೆಗಳಿಗೆ ಭೇಟಿ ನೀಡಿದಾಗ ಬಹುತೇಕ ಆಸ್ಪತ್ರೆಗಳು ಮುಚ್ಚಿರುವುದು ಕಂಡು ಬಂದಿತು. ಇದರಿಂದ ನಕಲಿ ವೈದ್ಯರು ಇರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ. ಮತ್ತೊಂದು ಬಾರಿ ಗುಪ್ತವಾಗಿ ಭೇಟಿ ನೀಡಿ ಸೂಕ್ತ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುವುದು. ನಕಲಿ ಇರುವುದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದೆಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.