ಸರ್ಕಾರದಿಂದ ಬಸವ ಉತ್ಸವ ಆಚರಿಸಲಿ: ವಿಜಯಕುಮಾರ್
ಚಿತ್ತಾಪುರ: ಪ್ರತಿ ಜಿಲ್ಲೆಯಲ್ಲಿ ಸರ್ಕಾರದಿಂದ ಬಸವ ಉತ್ಸವ ಆಚರಿಸಬೇಕು ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಕೇಂದ್ರ ಘಟಕ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಒತ್ತಾಯಿಸಿದರು.
ಇಲ್ಲಿನ ಅಕ್ಕಮಹಾದೇವಿ ಮಂದಿರದಲ್ಲಿ ಹಮ್ಮಿಕೊಂಡ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ತಾಲೂಕು ಘಟಕ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬೀದರನಲ್ಲಿ ಬಸವ ಉತ್ಸವ ಆಚರಿಸಲು ಸರ್ಕಾರ ಅನುದಾನ ನೀಡುವಂತೆ ಪ್ರತಿ ಜಿಲ್ಲೆಯಲ್ಲಿ ಬಸವ ಉತ್ಸವ ಆಚರಿಸಿ ವಚನ ಸಾಹಿತ್ಯ ಪ್ರಚಾರ ಮಾಡಬೇಕು ಎಂದು ಹೇಳಿದರು.
ಶರಣರ ವಚನಗಳು ಮನೆ ಮನಗಳಿಗೆ ತಲುಪಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ರಚಿಸಲಾಗಿದೆ ಎಂದರು.
ಶಾಲೆ-ಕಾಲೇಜುಗಳಲ್ಲಿ ವಚನ ಸಾಹಿತ್ಯದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅಕಾಡೆಮಿ ಕಾರ್ಯ ಬೀದರ, ಯಾದಗಿರಿ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಈಗಾಗಲೇ ತಾಲೂಕು ಹೋಬಳಿಗಳಲ್ಲಿ ಘಟಕ ರಚನೆ ಮಾಡಲಾಗಿದೆ ಎಂದರು.
ಕಾರ್ಯಕ್ರಮವನ್ನು ಹಿರಿಯ ನ್ಯಾಯವಾದಿ ಚಂದ್ರಶೇಖರ ಅವಂಟಿ ಉದ್ಘಾಟಿಸಿ ಮಾತನಾಡಿ, ಹೈ-ಕ ಪ್ರದೇಶದಲ್ಲಿ ಅನೇಕ ಶರಣರು ವಚನಗಳನ್ನು ಬರೆದು ವಚನ ಸಾಹಿತ್ಯ ಅಪಾರವಾದ ಕೊಡುಗೆ ನೀಡಿದ್ದಾರೆ. ಸರ್ಕಾರ ವಚನ ಸಾಹಿತ್ಯ ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಹೇಳಿದರು.
ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕೆಪಿಸಿಸಿ ಸದಸ್ಯ ನಾಗರಡ್ಡಿ ಪಟೀಲ್ ಕರದಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೇವರ್ಗಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಬಿರಾದಾರ ಅವರು ಕನ್ನಡಕ್ಕೆ ವಚನ ಸಾಹಿತ್ಯ ಹಿನ್ನಲೆ ಕುರಿತು ಉಪನ್ಯಾಸ ನೀಡಿದರು. ವಿಶ್ವಗಂಗಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಬಿರಾದಾರ, ತಾಲೂಕು ಕಸಾಪ ಅಧ್ಯಕ್ಷ ನಾಗಯ್ಯ ಸ್ವಾಮಿ ಅಲ್ಲೂರ, ಮಾಜಿ ಜಿಪಂ ಸದಸ್ಯ ಡಾ. ಗುಂಡಣ್ಣಾ ಬಾಳಿ ಮಾತನಾಡಿದರು.
ಪದಾಧಿಕಾರಿಗಳಾದ ಶಿವಕುಮಾರ ಸ್ಥಾವರಮಠ, ಉದಯಕುಮಾರ್ ಸಾಗರ, ವಿರುಪಾಕ್ಷಿ ಬೆಣ್ಣಿ, ಮಸ್ತಾನ್ ಪಟೇಲ್, ರಂಗನಾಥ ದೊರೆ, ನಾಗರಾಜ ಹೆಬ್ಬಾಳ, ನವೀನ ಕಲಬುರ್ಗಿ ಶರಣು ಜ್ಯೋತಿ ಇದ್ದರು.
ವಚನ ಸಾಹಿತ್ಯ ಅಕಾಡೆಮಿ ತಾಲೂಕು ಅಧ್ಯಕ್ಷ ಸಿದ್ಧಲಿಂಗ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಾಗರಾಜ ಹೂಗಾರ ಸ್ವಾಗತಿಸಿದರು. ರಾಜಶೇಖರ ಕಡಗನ್ ಪ್ರಾರ್ಥನೆ ಹಾಡಿದರು. ನರಸಪ್ಪ ಚಿನ್ನಕಟ್ಟಿ ನಿರೂಪಿಸಿ, ಕಾಶಿರಾಯ ಕಲಾಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

