ಆಹಾರ ಭದ್ರತೆಗೆ ವೈಜ್ಞಾನಿಕ ಬೆಲೆ ನಿಗದಿ ಅಗತ್ಯ: ಚಾಮರಸ ಪಾಟೀಲ್
ಲಿಂಗಸ್ಗೂರು: ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿದರೆ ಮಾತ್ರ ಆಹಾರ ಭದ್ರತೆ ಸಿಕ್ಕಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಅಭಿಪ್ರಾಯಪಟ್ಟರು.
ಪಟ್ಟಣದ ಐಎಂಎ ಸಭಾಂಗಣದಲ್ಲಿ ಮಂಗಳವಾರ ವೈದ್ಯಕಿರಣ ಪತ್ರಿಕೆಯ 6ನೇ ವಾರ್ಷಿಕೋತ್ಸವ ಹಾಗೂ ವೀರಕನ್ನಡಿಗ ಟಿಪ್ಪು ಸುಲ್ತಾನ್ ಪ್ರಶಸ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆ ಜಾರಿಯಿಂದ ಪ್ರಯೋಜನವಿಲ್ಲ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಹಾರ ಭದ್ರತೆ ಯೋಜನೆ ಜಾರಿಗೆ ತರುವುದರಿಂದ ಯಾವುದೇ ಪ್ರಯೋಜನವಿಲ್ಲ. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವುದರಿಂದ ಇಡಿ ದೇಶದ ಜನರಿಗೆ ಆಹಾರ ಭದ್ರತೆ ಸಿಕ್ಕಂತಾಗುತ್ತದೆ. ಅಲ್ಲದೆ ರೈತರು ಸ್ವಾವಲಂಬಿಗಳಾಗಿ ಬದುಕಲು ಸಹಕಾರಿಯಾಗಲಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ ಮಣೆ ಹಾಕುವ ಸರ್ಕಾರಗಳು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ಸರ್ಕಾರಗಳ ತಪ್ಪು ನೀತಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗ ಬಂದೊದಗಿದೆ. ಟಿಪ್ಪು ಸುಲ್ತಾನರು ದೇಶಾಭಿಮಾನದ ಜೊತೆಗೆ ರೈತರಪರ ಕಾಳಜಿ ಹೊಂದಿದ್ದರು. ಹೊಸ ತಳಿಗಳ ಉತ್ಪಾದನೆ, ನೀರಾವರಿಗೆ ಹೆಚ್ಚಿನ ಗಮನ ಹರಿಸಿದ್ದರು ಎಂದರು.
ಕಾರ್ಯಕ್ರಮದಲ್ಲಿ ಟಿಟ್ಟು ಸುಲ್ತಾನ್ ಸಂಘದ ರಾಷ್ಟ್ರಾಧ್ಯಕ್ಷ ಹಾಜಿ ರಸೂಲಸಾಬ ಮನ್ನೂರ, ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಡಾ. ಜಲಾಲುದ್ದಿನ್ ಅಕ್ಬರ್, ಸಂಪಾದಕ ಎಂ.ವೀರಭದ್ರಪ್ಪ, ವೀರಭದ್ರಯ್ಯಸ್ವಾಮಿ, ಎಸ್.ಬಿ. ಚರಕಿ, ಖಾದರಸಾಬ ಅಂಗಡಿ, ಬಾಬು ಪ್ರಸಾದ ಸಂತೆಕೆಲ್ಲೂರು, ಅಹ್ಮದ ಬಿನ್ ಚಾವೂಸ್, ರವಿಕುಮಾರ, ಅಬ್ದುಲ್ ರೌಫ್ ಗ್ಯಾರಂಟಿ, ಮೌನೇಶ ಹಟ್ಟಿ, ಶರಣಪ್ಪ ಹೊಳೆಯಾಚೆ, ಶಶಿನಾ ಚಿಕ್ಕಹೆಸರೂರ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

