ಹಾಸ್ಟೆಲ್ ಅವ್ಯವಸ್ಥೆ: ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
ರಾಯಚೂರು: ತಾಲೂಕಿನ ಯರಗೇರಾದಲ್ಲಿನ ಗುಲ್ಬರ್ಗ ವಿವಿಯ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಮಿಂಚಿನ ಪ್ರತಿಭಟನೆ ನಡೆಸಿದರು. ಸ್ನಾತಕೋತ್ತರ ಕೇಂದ್ರದ ಮುಖ್ಯದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ವಸತಿ ನಿಲಯವು ಅವ್ಯವಸ್ಥೆಯಿಂದ ಕೂಡಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೂಲಸೌಲಭ್ಯ ಕಲ್ಪಿಸುವಲ್ಲಿ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನಪ್ಪ, ಚಂದ್ರು, ಪ್ರದೀಪಕುಮಾರ್, ಬಸವರಾಜಸ್ವಾಮಿ ಇತರರು ಇದ್ದರು.
ಜಾಗೃತಿ ಕಾರ್ಯಕ್ರಮ
ರಾಯಚೂರು: ನಗರದ ವಾ.ಸಂ. 1ರಲ್ಲಿ ಇತ್ತೀಚೆಗೆ ನೀರು ಸರಬರಾಜು, ಒಳಚರಂಡಿ ಯೋಜನೆಯ ಕುರಿತು ತಿಳಿವಳಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಡಿಬಿ ನೆರವಿನ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕೆ ಕಾರ್ಯಕ್ರಮದ ಸಮುದಾಯ ಅಭಿವೃದ್ಧಿ ವಿಭಾಗದ ಅನುಷ್ಠಾನ ಸಂಸ್ಥೆಯ ವಿಶ್ವ ಸೇವಾ ಮಿಷನ್ ರಾಯಚೂರು, ನಗರಸಭೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಗರಸಭೆ ಸದಸ್ಯ ಜಯಣ್ಣ ಮಾತನಾಡಿ, ನಗರದಲ್ಲಿ 24್ಗ7 ನಿರಂತರ ಕುಡಿಯವ ನೀರು, ಒಳಚರಂಡಿ ಯೋಜನೆ ಕಾಮಗಾರಿ, ನೀರಿನ ಮಹತ್ವದ ಕುರಿತು ಮತ್ತು ಶೌಚಾಲಯ ಬಳಕೆ ಕುರಿತು ವಿವರಿಸಿದರು. ಯೋಜನಾಧಿಕಾರಿ ದಯಾನಂದ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೇಶದ ಸರ್ಕಾರಿ ಹಿರಿಯ ಪ್ರೌಢಶಾಲೆ ಮುಖ್ಯ ಗುರು ಮೇರಿಬಾಯಿ ಮುಖ್ಯ ಅತಿಥಿಗಳಾಗಿದ್ದರು. ನಗರಸಭೆಯ ಸಹಾಯಕ ಅಭಿಯಂತರ ಚಂದ್ರಶೇಖರ್ ಹಾಗೂ ಎಂಜಿನಿಯರ್ ರಾಜಶೇಖರ ಪಾಟೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

