ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಡಿ.5ರಂದು ಮುತ್ತಿಗೆ
ರಾಯಚೂರು: ನ್ಯಾ. ಸದಾಶಿವ ಆಯೋಗದ ವರದಿ ಯಥಾವತ್ತು ಜಾರಿಗೆ ಆಗ್ರಹಿಸಿ ಡಿ.2ರಂದು ಬೆಳಗಾವಿಗೆ ಸಂಘಟನೆಯಿಂದ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಮಾದಿಗ ದಂಡೋರಾದ ಜಿಲ್ಲಾಧ್ಯಕ್ಷ ಬಿ.ನರಸಪ್ಪ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿ.5ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಹಿನ್ನೆಲೆ ಡಿ. 2 ರಿಂದ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ತಾಲೂಕಿನ ಶಕ್ತಿನಗರದ ಅಂಬೇಡ್ಕರ್ ಭವನದಿಂದ ಡಿ.2 ರಂದು ಬೆಳಗ್ಗೆ 9ಕ್ಕೆ ರ್ಯಾಲಿ ಪ್ರಾರಂಭಗೊಳ್ಳಲಿದ್ದು, ಡಿ.5 ರಂದು ಮಧ್ಯಾಹ್ನ 11ಕ್ಕೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ರಾಜ್ಯದಲ್ಲಿ ಸದ್ಯ ಶೋಷಿತ ವರ್ಗಕ್ಕೆ ಸೇರಿದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದರೂ ಒಳಮೀಸಲಾತಿ ಜಾರಿಗೆ ಸಂಬಂಧಿಸಿ ಅವರು ನಿರ್ಲಕ್ಷ್ಯ ತೋರಿದ್ದಾರೆಂದು. ಅನ್ನಭಾಗ್ಯ, ಕ್ಷೀರಭಾಗ್ಯ ಹಾಗೂ ಶಾದಿಭಾಗ್ಯ ಯೋಜನೆಗಳನ್ನು ಜಾರಿಗೆ ತರಲು ತೋರಿದ ಆಸಕ್ತಿಯು ಅವರಲ್ಲಿ ಸಂವಿಧಾನಬದ್ಧವಾಗಿ ದೊರಕಿಸಬೇಕಾದ ಒಳಮೀಸಲಾತಿಯ ಭಾಗ್ಯಕ್ಕೆ ಕಂಡುಬಂದಿಲ್ಲ ಎಂದು ಆರೋಪಿಸಿದರು.
ಮುತ್ತಿಗೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಮಾದಿಗ ದಂಡೋರಾ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸಾವಿರಾರು ಕಾರ್ಯಕರ್ತರು ಡಿ.3ರಿಂದಲೇ ಸುವರ್ಣಸೌಧದ ಎದುರು ಅಹೋರಾತ್ರಿ ಧರಣಿ ನಡೆಸಲಿದ್ದು, ಡಿ.5ಕ್ಕೆ ಮುತ್ತಿಗೆ ಹಾಕಲಾವುದು ಎಂದರು.
ಈ ಸಂದರ್ಭ ಸಂಘಟನೆಯ ಹೇಮರಾಜ್ ಅಸ್ಕಿಹಾಳ, ಸುರೇಶ, ಬಾಬು ಮಟಮಾರಿ, ರಾಮಚಂದ್ರ, ಸುರೇಶ ಅಸ್ಕಿಹಾಳ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

