ರಸ್ತೆ ಕಳಪೆ ಕಾಮಗಾರಿ: ಕ್ರಮಕ್ಕೆ ಮನವಿ
ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ವೀರಾಪುರ ಗ್ರಾಮಸ್ಥರ ಒತ್ತಾಯ
ಲಿಂಗಸ್ಗೂರು: ತಾಲೂಕಿನ ಹಟ್ಟಿ ಗ್ರಾಮದಿಂದ ಪಾಮನಕಲ್ಲೂರುವರೆಗಿನ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದ್ದು, ಅಲ್ಲದೆ ಗೆಜ್ಜಲಗಟ್ಟಾವರೆಗೆ ಅಪೂರ್ಣಗೊಂಡಿದೆ. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ವೀರಾಪುರ ಗ್ರಾಮಸ್ಥರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಹಟ್ಟಿಯಿಂದ ಪಾಮನಕಲ್ಲೂರವರೆಗೆ ಕೈಗೊಳ್ಳಬೇಕಿದ್ದ ರಸ್ತೆ ಕಾಮಗಾರಿ ಗೆಜ್ಜಲಗಟ್ಟಾ ಗ್ರಾಮದ ಸರಕಾರಿ ಪ್ರೌಢ ಶಾಲೆವರೆಗೆ ನಿರ್ಮಿಸಲಾಗಿದೆ. ಕೆಲ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ರಸ್ತೆ ಕಾಮಗಾರಿ ಕಳಪೆಯಾದ ಕುರಿತು ವಿರೋಧ ವ್ಯಕ್ತಪಡಿಸಿದರೂ, ಕಾಮಗಾರಿ ಕೈಗೊಂಡಿದ್ದಾರೆ. ರಸ್ತೆ ನಿರ್ಮಿಸಿದ ಕೇವಲ 6 ತಿಂಗಳಲ್ಲಿ ಹದಗೆಟ್ಟು ಗುಂಡಿಗಳು ನಿರ್ಮಾಣಗೊಂಡು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುಣಮಟ್ಟದ ರಸ್ತೆ ನಿರ್ಮಿಸುವಲ್ಲಿ ಬೇಜವಬ್ದಾರಿ ತೋರಿದ್ದಾರೆಂದು ಆರೋಪಿಸಿದರು.
ಕೂಡಲೇ ರಸ್ತೆ ಕಾಮಗಾರಿ ಕುರಿತು ಪರಿಶೀಲನೆ ನಡೆಸಿ ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ರಸ್ತೆ ಕಾಮಗಾರಿ ಪಾಮಕಲ್ಲೂರವರೆಗೆ ಪೂರ್ಣಗೊಳಿಸಬೇಕು. ಗೆಜ್ಜಲಗಟ್ಟಾ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆಯಿದ್ದು, ಇರುವ ಸಿಬ್ಬಂದಿ ಸರಿಯಾಗಿ ಕಾರ್ಯ ನಿರ್ವಹಿಸದ ಪರಿಣಾಮ ರೋಗಿಗಳು ಹಟ್ಟಿ ಹಾಗೂ ಲಿಂಗಸ್ಗೂರು ಆಸ್ಪತ್ರೆಗಳಿಗೆ ಅಲೆದಾಡುವಂತಾಗಿದೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು.
ಟಾಪ್ ಪ್ರಯಾಣ: ಹಟ್ಟಿ ಪಾಮನಕಲ್ಲೂರ ಮಾರ್ಗದಲ್ಲಿ ಸಾರಿಗೆ ಬಸ್‌ಗಳ ಕೊರತೆಯಿಂದ ಖಾಸಗಿ ವಾಹನಗಳ ಟಾಪ್ ಮೇಲೆ ಕುಳಿತು ಸಂಚರಿಸುವ ಪರಿಸ್ಥಿತಿ ಬಂದೊದಗಿದೆ. ಸಾರಿಗೆ ಇಲಾಖೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರದ ಆದೇಶದ ಪ್ರಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಸರಿಯಾಗಿ ವಿತರಿಸದೆ ಮನಬಂದಂತೆ ನೀಡಲಾಗುತ್ತಿದೆ. ಇತ್ತಿಚಿಗೆ ಗೋಧಿ ವಿತರಿಸಲಾಗುತ್ತಿದ್ದು, ಫಲಾನುಭವಿಗಳಿಗೆ ಎಷ್ಟು ಕೆಜಿ ನೀಡಬೇಕೆಂಬುದು ಖಚಿತಪಡಿಸಬೇಕು.
ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ಅಧಿಕಾರಿಗಳು ಗಮನ ಹರಿಸಿ ಪರಿಹರಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವೀರಾಪೂರ ಗ್ರಾಮದ ಮುಖಂಡರಾದ ನಿಂಗಣ್ಣ, ಮಹಾದೇವಪ್ಪಗೌಡ, ರಮೇಶ ಕೋಠಾ, ಬಸನಗೌಡ, ಸೂರ್ಯಪ್ಪ, ಬಸವರಾಜ, ಅಭಿಷೇಕ, ನಾಗರಾಜ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

