ಅನ್ನದಾತನ ಸಾವಿಗೆ ಸರ್ಕಾರವೇ ಹೊಣೆ
ಕರ್ನಾಟಕ ರೈತ ಸಂಘ ತಾಲೂಕು ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹನ
ಸಿಂಧನೂರು: ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತ ವಿಠಲ್ ಅರಬಾವಿ ಸಾವಿಗೆ ಸರ್ಕಾರದ ಹೊಣಗೇಡಿತನ ಕಾರಣ ಎಂದು ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಗಾಂಧಿ ಸರ್ಕಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿತು.
ಕಳೆದೆರಡು ತಿಂಗಳಿಂದ ಬೆಳಗಾವಿ ಜಿಲ್ಲೆಯ ರೈತರು ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಹೋರಾಟ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದ್ದರಿಂದ ರೈತ ಸಹೋದರ ಸಾವಿಗೆ ಶರಣಾಗಿದ್ದಾನೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ರೈತರು ಸಾಲಕ್ಕೆ ಗುಳೆ ಹೋಗುತ್ತಿದ್ದಾರೆ. ಬೆಳಗಾವಿಯಲ್ಲಿ ಮೃತಪಟ್ಟ ರೈತನ ಮೇಲೆ ಪ್ರತಿಪಕ್ಷಗಳು ರಾಜಕಾರಣ ಮಾಡುತ್ತಿವೆ. ಎರಡು ತಿಂಗಳು ಧರಣಿ ನಡೆಸಿದರೂ ಆ ಬಗ್ಗೆ ಚಕಾರವೆತ್ತದೆ ಈಗ ಬೊಬ್ಬೆ ಹೊಡೆಯುತ್ತಿರುವುದು ಯಾಕೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮೃತ ರೈತನ ಹೆಸರು ಶಾಶ್ವತವಾಗಿ ಉಳಿಯಲು ವಿಠಲ್ ಕಂಕಣವಾಡಿ ಎಂದು ಮರುನಾಮಕರಣ ಮಾಡಬೇಕು. ಬಾಕಿ ಉಳಿದಿರುವ ಕಬ್ಬಿನ ಮೊತ್ತವನ್ನು ಕೂಡಲೇ ಪಾವತಿಸಬೇಕು. ಬತ್ತಕ್ಕೆ 2,500 ಬೆಂಬಲ ಬೆಲೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ ಮನವಿ ಪತ್ರವನ್ನು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ತಾಲೂಕಾಧ್ಯಕ್ಷ ರಮೇಶ ಪಾಟೀಲ್, ಬಸವರಾಜ ಬೆಳಗುರ್ಕಿ, ಹುಚ್ಚಪ್ಪ ಮೂಲಿಮನಿ, ಭೀಮಣ್ಣ ನಾಯಕ, ಎಂ.ಗಂಗಾಧರ, ನಾಗರಾಜ್ ಪೂಜಾರ್, ರಾಜಪ್ಪ ಎನ್, ನಾಗಪ್ಪ ಬೇರಿಗಿ, ಬಸಪ್ಪ ಕಡಬೂರು, ಪಂಪಣ್ಣ ಕುರುಕುಂದಿ, ಯಂಕಪ್ಪ, ದೊಡ್ಡನಗೌಡ ಬೂದಿಹಾಳ, ಬಜಾರೆಪ್ಪ, ರಾಯಣ್ಣ, ದೇವಣ್ಣ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

