ರಾಯಚೂರು

ಅಪರಿಚಿತ ವ್ಯಕ್ತಿ ಸಾವು

Published On :

ರಾಯಚೂರು: ಇಲ್ಲಿನ ಶಕ್ತಿನಗರದ ಮುಖ್ಯರಸ್ತೆಯ ಎಸ್‌ಎಲ್‌ಎನ್ ಆಗ್ರೋ ಇಂಡಸ್ಟ್ರೀಸ್ 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾನೆ.  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನ ಪಲ್ಟಿ:  ಸಾವು
ರಾಯಚೂರು: ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಆಪೆ ವಾಹನ ಪಲ್ಟಿಯಾಗಿ ರಸ್ತೆಬದಿ ಸಾಗುತ್ತಿದ್ದ ಮೈನುದ್ದೀನ್ (19) ಎಂಬಾತನ ಮೇಲೆ ಬಿದ್ದು ಆತ ಮೃತಪಟ್ಟಿದ್ದಾನೆ. ವಾಹನವು ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದ್ದರಿಂದ ಸ್ಥಳದಲ್ಲೇ ಸಾವಪ್ಪಿದ್ದಾನೆ.

ಡಿ.1ರಂದು ಸಚಿವ ಬಾಬುರಾವ್ ಭೇಟಿ
ರಾಯಚೂರು: ರಾಜ್ಯದ ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ಅವರು ಡಿ.1ಕ್ಕೆ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ನ.30ರಂದು ಬೆಂಗಳೂರಿನಿಂದ ಹೊರಟು ನಗರಕ್ಕೆ ಡಿ.1ಕ್ಕೆ ನಗರಕ್ಕೆ ಆಗಮಿಸಿ ಶಕ್ತಿನಗರದ ಕೆಪಿಸಿ ಅತಿಥಿ ಗೃಹದಲ್ಲಿ ತಂಗುವರು. ನಂತರ ಅವರು ಬೆಳಗ್ಗೆ 9ಕ್ಕೆ ಯಾದಗಿರಿ ಜಿಲ್ಲೆ ಸೈದಾಪೂರ ಗ್ರಾಮಕ್ಕೆ ತೆರಳಲಿದ್ದಾರೆಂದು ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ತಿಳಿಸಿದ್ದಾರೆ.

ಹೊಟ್ಟೆನೋವು; ವ್ಯಕ್ತಿ ಆತ್ಮಹತ್ಯೆ
ರಾಯಚೂರು: ಸಿಂಧನೂರು ನಗರದ ಚಕಲೇರಗಲ್ಲಿಯಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತನನ್ನು ಗಣೇಶ್ ಎಂದು ಗುರುತಿಸಲಾಗಿದೆ. ಈತ ಕಳೆದ 2 ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು ಅದರಿಂದ ಬೇಸತ್ತಿದ್ದ ಆತ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಶವ ಪತ್ತೆ
ರಾಯಚೂರು: ಸಿಂಧನೂರು ತಾಲೂಕಿನ ತುಂಗಭದ್ರಾ ನದಿ ತೀರ ಪ್ರದೇಶದಲ್ಲಿ ಅಪರಿಚಿತ ಮಹಿಳೆಯೊಬ್ಬಳು ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವಿಗೀಡಾಗಿದ್ದಾಳೆ. ಮೃತಳು 40- 45 ವರ್ಷ ವಯಸ್ಸಿನವಳಾಗಿದ್ದು, ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಈಜು ಬಾರದೆ ಮುಳುಗಿ ಮೃತಪಟ್ಟಿದ್ದು, ಮೃತಳ ಶವ ಪತ್ತೆಯಾಗಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.