ಇಂದು ಆಶಾ ಕಾರ್ಯಕರ್ತೆಯರ ಸಮಾವೇಶ
ರಾಯಚೂರು: ನಗರದ ರಂಗಮಂದಿರದಲ್ಲಿ ನ.29 ರಂದು ಆಶಾ ಕಾರ್ಯಕರ್ತೆಯರ ಜಿಲ್ಲಾಮಟ್ಟದ ಸಮಾವೇಶ ಮತ್ತು ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ರಾಜ್ಯ ಸರ್ಕಾರದಿಂದ ಪ್ರೋತ್ಸಾಹಧನ ಇತ್ಯಾದಿ ಯಶಸ್ಸುಗಳನ್ನು ಗಳಿಸಿದ ವಿಜಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸಂಘವನ್ನು ಪಿಎಚ್ಸಿ ಮಟ್ಟದಿಂದ ಬಲಪಡಿಸಲು ಹಾಗೂ ಇನ್ನೂ ಪರಿಹಾರ ಆಗದಿರುವ ಕೆಲವು ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ನ.29 ರಂದು ಬೆಳಗ್ಗೆ 11 ಗಂಟೆಗೆ ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಆಯೋಜಿಸಿರುವ ಸಮಾವೇಶದ ಅಂಗವಾಗಿ ಸಮಸ್ಯೆಗಳ ಇತ್ಯರ್ಥಕ್ಕಾಗಿ ಆಶಾ ಕಾರ್ಯಕರ್ತೆಯರ ಬೃಹತ್ ರ್ಯಾಲಿ ರಂಗಮಂದಿರದಿಂದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗೆ ಮಧ್ಯಾಹ್ನ 1.30ಕ್ಕೆ ನಡೆಯಲಿದೆ.
ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಟಿ.ಎಸ್. ಸುನೀತ್ಕುಮಾರ್, ಭಾಷಣಕಾರರಾಗಿ ಸಂಘಟನೆ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಅಪರ್ಣಾ ಬಿ.ಆರ್. ಆಗಮಿಸುವರು. ಅಧ್ಯಕ್ಷತೆ ವೀರೇಶ್ ಎನ್.ಎಸ್. ಪಾಲ್ಗೊಳ್ಳಲಿದ್ದಾರೆ.
ಇಂದಿನಿಂದ ರಜತ ಮಹೋತ್ಸವ
ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ನ.30 ಮತ್ತು ಡಿ.1ರಂದು ಸಂತ ಅಲ್ಫೋನ್ಸಾ ದೇವಾಲಯ ಮತ್ತು ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಕ್ತಿನಗರ ಶಾಲೆ ಆವರಣದಲ್ಲಿ ನ.30 ರಂದು ಬೆಳಗ್ಗೆ 10.30 ಗಂಟೆಗೆ ಹಳೆಯ ವಿದ್ಯಾರ್ಥಿಗಳು, ಮುಖ್ಯಗುರುಗಳು, ಶಿಕ್ಷಕ ವೃಂದದವರಿಗೆ ಸನ್ಮಾನ ಕಾರ್ಯಕ್ರಮ ಸಮ್ಮಿಲನ ಆಯೋಜಿಸಿದೆ. ಶಾಲಾ ಆಡಳಿತ ಮಂಡಳಿ ವ್ಯವಸ್ಥಾಪಕ ರೆವರೆಂಡ್ ಫಾದರ್ ಜ್ಞಾನಪ್ರಕಾಶಂ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ನಿವೃತ್ತ ಮುಖ್ಯಗುರುಗಳಾದ ಶಾಂತಿನಿ ಮೋಹನ್ ದಾಸ್, ದಾನೇಶ್ವರಿ ದೇವಕುಮಾರ್ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಯಿಂದಮೆರವಣಿಗೆ ಬಲಿಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆ ಡಾ.ಹೆನ್ರಿ ಡಿಸೋಜಾ ವಹಿಸುವರು. ರೆವರೆಂಡ್ ಫಾದರ್ ಅರೋಕ್ಯನಾದನ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಇತರರು ಪಾಲ್ಗೊಳ್ಳುವರು.
ಇಂದಿನಿಂದ ವಿಚಾರ ಸಂಕಿರಣ
ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆಯ ಫಾರ್ಮಸಿ ಕಾಲೇಜಿನಲ್ಲಿ ನ.29ರಿಂದ ಅಡ್ವಾನ್ಸಸ್ ಇನ್ ಫಾರ್ಮಸಿ ಪ್ರಾಕ್ಟೀಸ್ ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಅಂದು ನವೋದಯ ಶಿಕ್ಷಣ ಸಂಸ್ಥೆಯ ಡಾ.ಸಿ.ಎಂ. ಗುರುಮೂರ್ತಿ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಶಿಕ್ಷಣ ಸಂಸ್ಥೆಯ ರಿಜಿಸ್ಟ್ರಾರ್ ಡಾ.ಟಿ. ಶ್ರೀನಿವಾಸ್, ಅತಿಥಿಗಳಾಗಿ ಮೆಡಿಕಲ್ ಡೈರೆಕ್ಟರ್ ಡಾ.ಎಸ್.ಆರ್. ಹೆಗಡೆ, ಪ್ರಾಚಾರ್ಯ ಡಾ.ಎಚ್. ದೊಡ್ಡಯ್ಯ ಪಾಲ್ಗೊಳ್ಳಲಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಸಭೆ
ರಾಯಚೂರು: ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯ ವೀಕ್ಷಕರಾಗಿ ಗುಲ್ಬರ್ಗದ ಪ್ರಾದೇಶಿಕ ಆಯುಕ್ತರು ನೇಮಕಗೊಂಡಿದ್ದು, ನ.30ರಂದು ಅಧಿಕಾರಿಗಳ ಸಭೆ ನಡೆಸಲಿದ್ದಾರೆಂದು ಜಿಲ್ಲಾಡಳಿತದ ತಿಳಿಸಿದೆ. ಜಿಲ್ಲೆಯ ಲಿಂಗಸ್ಗೂರಿನ ತಹಸೀಲ್ ಕಚೇರಿಯಲ್ಲಿ ನ.30ರಂದು ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಹಾಗು ತಹಸೀಲ್ದಾರರ ಸಭೆ ನಡೆಸಿ ಸಮಾಲೋಚಿಸಲಿದ್ದಾರೆ. ಮತದಾರರು ತಮ್ಮ ಅಹವಾಲುಗಳನ್ನು ಸಲ್ಲಿಸಲು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

