'ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ'
ದೇವದುರ್ಗ: ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಹೆಚ್ಚಿನ ಗಮನ ಹರಿಸಬೇಕೆಂದು ಯೂನಿಸೆಫ್ ಮಕ್ಕಳ ಹಕ್ಕು ಯೋಜನೆಯ ಜಿಲ್ಲಾ ಸಂಯೋಜಕ ಅಜಿತಕುಮಾರ್ ಸಲಹೆ ನೀಡಿದರು.
ತಾಲೂಕಿನ ನಾಗಡದಿನ್ನಿ ಗ್ರಾಮದ ಮಕ್ಕಳ ಗ್ರಾಮ ಸಭೆಯಲ್ಲಿ ಮಾತನಾಡಿ, ಮಕ್ಕಳನ್ನು ದೇವರಂತೆ ಕಾಣುವ ನಾವು ಅವರ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣ ನೀಡಿಕೆ ಅವಶ್ಯಕ ಎಂಬುದನ್ನು ಅರಿಯಬೇಕು. ದೇಶದ ಅಭಿವೃದ್ಧಿಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಕ್ಕಳ ಪ್ರಗತಿಯೂ ಅವಶ್ಯ ಎಂದರು.
ಗ್ರಾಪಂ ಅಧ್ಯಕ್ಷರಾದ ಬೂದೆಮ್ಮ ಹೆಗ್ಗಡದಿನ್ನಿ, ಪಿಡಿಒ ವಿಜಯಕುಮಾರ, ಹನುಮಂತರಾಯ ಬಾಡಲ್, ಬಸಯ್ಯಸ್ವಾಮಿ, ಮೌನೇಶ ನಾಯಕ, ನಬೀಸಾಬ್, ಈರಪ್ಪ ಭಾವಿಮನಿ, ಅಮರೇಶಗೌಡ, ಸಿದ್ದಲಿಂಪ್ಪ ಕಾಕರಗಲ್ ಸೇರಿ ಗ್ರಾಪಂ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಾಕ್ಷರತಾ ಪ್ರೇರಕರು, ಮಕ್ಕಳು, ಪಾಲಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

