'ಕೈ' ಬಲವರ್ಧನೆಗೆ ಕಾರ್ಯಕರ್ತರು ಮುಂದಾಗಬೇಕು: ರಾಮಣ್ಣ
ಮುದಗಲ್: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಕೇಂದ್ರದಲ್ಲಿಯೂ ಬರುವ ಲೋಕಸಭೆ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕಾಂಗ್ರೆಸ್ ಎಸ್ಸಿ ಮೊರ್ಚಾ ಮುದಗಲ್ ಘಟಕದ ಅಧ್ಯಕ್ಷ ರಾಮಣ್ಣ ಹಿರೇಮನಿ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿ ಪಕ್ಷದಲ್ಲಿ ಭೀನ್ನಾಭಿಪ್ರಾಯಗಳು ಇದ್ದಲ್ಲಿ, ಅದನ್ನು ಬದಿಗಿಟ್ಟು ಪಕ್ಷ ಸಂಘಟನೆಗೆ ಪಕ್ಷದ ಹಿರಿಯ ಮುಖಂಡರು, ಚುನಾಯಿತಿ ಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸಬೇಕು. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕೆಲವರಿಗೆ ಅಸಮಧಾನವಾಗಿರಬಹುದು. ಅದನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಮನವಿ ಮಾಡಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಡಾ.ಅಯ್ಯಪ್ಪ ಬನ್ನಿಗೋಳ, ಮುಖಂಡರಾದ ದಾವೂದ್, ನಾಗನಗೌಡ ತುರಡಗಿ, ಷರಿಫ್ವ್ಕೀಲ ಮಾತನಾಡಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಗಳಿಗೆಯಲ್ಲೆ ಪರಿಶಿಷ್ಟ ಜಾತಿ ಪಂಗಡ ಜನಾಂಗದ ಸಾಲ ಮನ್ನಾ ಮಾಡಿದರು, ಬಡವರಿಗೆ ರು. 1ಗೆ ಕೆಜಿ ಅಕ್ಕಿ ನೀಡುವ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನ್ವರಖಾನ್ ವಹಿಸಿದ್ದರು. ಮುಖಂಡರಾದ ಚನ್ನವೀರಪ್ಪಗೌಡ ಪಾಗಾದ್, ಸುರೇಶಗೌಡ ಪಾಟೀಲ್, ಡಾ.ಬಸವರಾಜ ಹೊರಪೇಟೆ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹ್ಮದ ಮಾಸೂಮ ಷರೀಫ್, ಶಿವರಾಜ ತಳವಾರ, ರಾಮಣ್ಣ ಹೊಸಮನಿ, ಮುಖಂಡರಾದ ನಂದಪ್ಪ ಕತ್ತಿ, ಸಂಜೀವಪ್ಪ ಹಂಚಿನಾಳ, ಅಮರೇಶ ಆಮದಿಹಾಳ, ಶರಣಬಸವ ಜಂತಾಪೂರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

